ADVERTISEMENT

ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ: ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 19:42 IST
Last Updated 8 ಫೆಬ್ರುವರಿ 2020, 19:42 IST
ಸಭೆಯನ್ನು ಉದ್ದೇಶಿಸಿ, ತಹಶೀಲ್ದಾರ್ ಎನ್.ರಘುಮೂರ್ತಿ ಮಾತನಾಡಿದರು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಮುಖ್ಯಶಿಕ್ಷಕರು ಇದ್ದರು. 
ಸಭೆಯನ್ನು ಉದ್ದೇಶಿಸಿ, ತಹಶೀಲ್ದಾರ್ ಎನ್.ರಘುಮೂರ್ತಿ ಮಾತನಾಡಿದರು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಮುಖ್ಯಶಿಕ್ಷಕರು ಇದ್ದರು.    

ಯಲಹಂಕ: ಮುಂಬರುವ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕು ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಶಿಕ್ಷಕರ ಹೆಸರುಗಳನ್ನು ಮತ್ತೆ ಸೇರ್ಪಡೆ ಸಂಬಂಧ ತಹಶೀಲ್ದಾರ್ ಶನಿವಾರ ಸಭೆ ನಡೆಸಿದರು.

‘ತಾಲ್ಲೂಕು ವ್ಯಾಪ್ತಿಯಲ್ಲಿ ಶೇ 15ರಿಂದ ಶೇ 20ರಷ್ಟು ಹೆಸರುಗಳು ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು, ಚುನಾವಣಾ ಆಯೋಗ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ’ಎಂದು ತಹಶೀಲ್ದಾರ್‌ ಎಸ್. ರಘುಮೂರ್ತಿ ತಿಳಿಸಿದರು.

‘ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿ ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಮತ್ತೆ ಪಟ್ಟಿಯನ್ನು ಪರಿಷ್ಕರಿಸಬೇಕಾಗಿದೆ’ ಎಂದರು.

ADVERTISEMENT

ಕ್ಷೇತ್ರಶಿಕ್ಷಣಾಧಿಕಾರಿ ಕಮಲಾಕರ್, ‘ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರಗಳಿಗೆ ಅನುಗುಣವಾಗಿ ಶಿಕ್ಷಕರು ವಾಸಿಸುತ್ತಿರುವ ಪ್ರದೇಶಗಳ ಆಧಾರದ ಮೇಲೆ ಈಗಾಗಲೇ ತಾತ್ಕಾಲಿಕ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ವಾಸಸ್ಥಳ ಪ್ರಮಾಣಪತ್ರದ ಆಧಾರದ ಮೇಲೆ ಉಳಿದ ಶಿಕ್ಷಕರ ಹೆಸರು ಸೇರಿಸಿ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.