ADVERTISEMENT

ಗ್ರಾಮ ಪಂಚಾಯಿತಿಯಿಂದ ‘ನಮ್ಮ ಮೆಡಿಕಲ್ಸ್’

​ಪ್ರಜಾವಾಣಿ ವಾರ್ತೆ
Published 30 ಜೂನ್ 2019, 19:37 IST
Last Updated 30 ಜೂನ್ 2019, 19:37 IST
‘ನಮ್ಮ ಮೆಡಿಕಲ್ಸ್’ ಮಳಿಗೆಯನ್ನು ಸಚಿವ ಕೃಷ್ಣ ಬೈರೇಗೌಡ ವೀಕ್ಷಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಕೆ. ಮಹೇಶ್‌ಕುಮಾರ್ ಇದ್ದರು
‘ನಮ್ಮ ಮೆಡಿಕಲ್ಸ್’ ಮಳಿಗೆಯನ್ನು ಸಚಿವ ಕೃಷ್ಣ ಬೈರೇಗೌಡ ವೀಕ್ಷಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಕೆ. ಮಹೇಶ್‌ಕುಮಾರ್ ಇದ್ದರು   

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ದೊಡ್ಡಜಾಲ ಗ್ರಾಮ ಪಂಚಾಯಿತಿ ವತಿಯಿಂದ ಸಾದಹಳ್ಳಿ ಗೇಟ್ ಸಮೀಪ ನಿರ್ಮಿಸಿರುವ‘ನಮ್ಮ ಮೆಡಿಕಲ್ಸ್’ ಔಷಧಿ ಅಂಗಡಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ಭಾನುವಾರ ಉದ್ಘಾಟಿಸಿದರು.

‘ಗ್ರಾಮ ಪಂಚಾಯಿತಿಯಿಂದ ಸ್ಥಾಪಿಸಿರುವ ಮೊದಲ ಔಷಧಿ ಅಂಗಡಿ ಇದಾಗಿದೆ. ಖಾಸಗಿ ಔಷಧ ಮಳಿಗೆಗಳಲ್ಲಿ ಜನರಿಕ್ ಸೇರಿದಂತೆ ಸಾವಿರಕ್ಕೂ ಹೆಚ್ಚು ಔಷಧಿಗಳು ಶೇ 30ರಿಂದ 40ರಷ್ಟು ರಿಯಾಯಿತಿಯಲ್ಲಿ ದೊರೆಯಲಿವೆ’ ಎಂದುಅಧಿಕಾರಿಗಳು ಮಾಹಿತಿ ನೀಡಿದರು.

ಆಟೋ ನಿಲ್ದಾಣದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೂ ಇದೇ ವೇಳೆ ಚಾಲನೆ ನೀಡಲಾಯಿತು.

ADVERTISEMENT

ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಬಹುತೇಕ ಗ್ರಾಮ ಪಂಚಾಯಿತಿಗಳು ಸರ್ಕಾರದ ಮೇಲೆ ಅವಲಂಬಿತವಾಗಿವೆ. ಈ ಗ್ರಾಮ ಪಂಚಾಯಿತಿ ಸ್ವಾವಲಂಬಿಯಾಗಿರುವುದು ಸಂತಸದ ಸಂಗತಿ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.