ನಮ್ಮ ಮೆಟ್ರೊ
ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿ ಇಂದಿರಾನಗರ–ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಜುಲೈ 6ರಂದು ಬೆಳಿಗ್ಗೆ 7ರಿಂದ 8ರವರೆಗೆ ಮೆಟ್ರೊ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.
ಸ್ವಾಮಿ ವಿವೇಕಾನಂದ ಮೆಟ್ರೊ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಚಲ್ಲಘಟ್ಟದಿಂದ ಇಂದಿರಾನಗರವರೆಗೆ ಮತ್ತು ಬೈಯ್ಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್ ವರೆಗೆ (ಕಾಡುಗೋಡಿ) ಮೆಟ್ರೊ ಸಂಚಾರ ಎಂದಿನಂತೆ ಇರಲಿದೆ. ಇಂದಿರಾನಗರ–ಬೈಯ್ಯಪ್ಪನಹಳ್ಳಿ ನಡುವೆ ಬೆಳಿಗ್ಗೆ 8ರಿಂದ ಮೆಟ್ರೊ ಸಂಚಾರ ಪ್ರಾರಂಭವಾಗಲಿದೆ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಶನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.