ಬೆಂಗಳೂರು: ನಗರದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಗಳು ನಡೆಯುವ ದಿನಗಳಂದು ಎಲ್ಲ ನಾಲ್ಕು ಮೆಟ್ರೊ ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೊ ರೈಲು ಸೇವೆಯನ್ನು ರಾತ್ರಿ 12.30ರವರೆಗೆ ವಿಸ್ತರಿಸಲಾಗುವುದು ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.
ಏಪ್ರಿಲ್ 2, 10, 18 ಹಾಗೂ ಮೇ 3, 13 ಮತ್ತು 17ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟಿ–20 ಕ್ರಿಕೆಟ್ ಪಂದ್ಯಾವಳಿಗಳು ನಡೆಯಲಿವೆ. ಈ ದಿನಗಳಂದು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಕ್ರಿಕೆಟ್ ವೀಕ್ಷಣೆಗಾಗಿ ಕ್ರೀಡಾಂಗಣಕ್ಕೆ ಭೇಟಿ ನೀಡುತ್ತಾರೆ.
ಕ್ರೀಡಾ ಪ್ರೇಮಿಗಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಪಂದ್ಯಾವಳಿ ನಡೆಯುವ ದಿನಗಳಂದು ‘ನಮ್ಮ ಮೆಟ್ರೊ’ದ ವೈಟ್‌ಫೀಲ್ಡ್(ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆಸಂಸ್ಥೆ ಮತ್ತು ಮಾದಾವರ ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೊ ರೈಲು ಸೇವೆಯನ್ನು ರಾತ್ರಿ 12.30ರವರೆಗೆ ವಿಸ್ತರಿಸಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಂದ ಕೊನೆಯ ರೈಲು ಮಧ್ಯರಾತ್ರಿ 1.15 ಕ್ಕೆ ಹೊರಡಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳು ನಡೆಯುವ ವೇಳೆ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ಏಪ್ರಿಲ್ 2ರಿಂದ ಮೇ 5ರವರೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುವ ದಿನಗಳಲ್ಲಿನ ಮಧ್ಯಾಹ್ನ 3ರಿಂದ ರಾತ್ರಿ 12ರವರೆಗೆ ಈ ಮಾರ್ಪಾಡು ಇರಲಿದೆ.
ಏಪ್ರಿಲ್ 10, 18, 24, ಮೇ 4, 13 ಮತ್ತು 17ರಂದು ಪಂದ್ಯಗಳು ನಡೆಯಲಿವೆ. ಪಂದ್ಯದ ಸಂದರ್ಭದಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡುಗಳನ್ನು ಮಾಡಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲೂ ವಾಹನಗಳ ನಿಲುಗಡೆ ಸ್ಥಳದ ಕೊರತೆ ಇರುವುದರಿಂದ ಹಾಗೂ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ದಟ್ಟಣೆ ತಪ್ಪಿಸಲು ಕ್ರಿಕೆಟ್ ಪಂದ್ಯಗಳ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ (ಬಿಎಂಟಿಸಿ ಹಾಗೂ ಮೆಟ್ರೊ) ಸೇವೆಯನ್ನು ಬಳಸುವಂತೆ ಸಂಚಾರ ಪೊಲೀಸರು ಕೋರಿದ್ದಾರೆ.
l ಕ್ವೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ
l ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ
l ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆವರೆಗೆ
l ರಾಜಭವನ ರಸ್ತೆಯಲ್ಲಿ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ
l ಸೆಂಟ್ರಲ್ ಸ್ಟ್ರೀಟ್‌ನ ಎರಡೂ ಕಡೆ
l ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಒ ವೃತ್ತದಿಂದ ಡಿಕನ್ಸ್‌ನ್ ರಸ್ತೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ
l ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕನ್ಸನ್ ರಸ್ತೆ ಜಂಕ್ಷನ್‌ವರೆಗೆ ಬಿ.ಎಂ.ಟಿ.ಸಿ ಬಸ್ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ವಾಹನಗಳ ನಿಲುಗಡೆ ನಿಷೇಧ
l ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ
l ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ
l ಕಸ್ತೂರಬಾ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ
ಕಬ್ಬನ್ ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಫೌಂಟೇನ್ ರಸ್ತೆ
l ಲ್ಯಾವೆಲ್ಲೆ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್ ವರೆಗೆ
ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಸೈಂಟ್ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
l ಸೇಂಟ್ ಜೋಸೆಫ್ಸ್ ಇಂಡಿಯನ್ ಹೈಸ್ಕೂಲ್ ಮೈದಾನ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ
l ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೇ ಮಹಡಿ ಮತ್ತು ಓಲ್ಡ್ ಕೆಜಿಐಡಿ ಬಿಲ್ಡಿಂಗ್
l ಕಿಂಗ್ಸ್ ರಸ್ತೆ (ಕಬ್ಬನ್ ಪಾರ್ಕ್ ಒಳಭಾಗ)
l ಸೇಂಟ್ ಜೋಸೆಫ್ಸ್ ಬಾಯ್ಸ್ ಹೈಸ್ಕೂಲ್, ಬೇಸ್‌ಮೆಂಟ್ ಪಾರ್ಕಿಂಗ್
ಪಿಕ್‌ಅಪ್ ಮತ್ತು ಡ್ರಾಪ್ ಸ್ಥಳ
ಕಬ್ಬನ್ ರಸ್ತೆ (ಬಿಆರ್‌ವಿ ಜಂಕ್ಷನ್‌ನಿಂದ ಸಿಟಿಒ ವೃತ್ತದವರೆಗೆ ಮಾತ್ರ)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.