ಮೆಟ್ರೊ ರೈಲಿನಲ್ಲಿ ಪ್ರಯಾಣ ಬೆಳೆಸಿದ ಮೋದಿ. ಅಕ್ಕ– ಪಕ್ಕ ಸಿಎಂ, ಡಿಸಿಎಂ ಇದ್ದರು, ಸಂಗ್ರಹ ಚಿತ್ರ
ಬೆಂಗಳೂರು: ಬೆಂಗಳೂರು ಮೆಟ್ರೊ ಪ್ರಯಾಣ ದರ ಏರಿಕೆಯಲ್ಲಿ ರಾಜ್ಯ ಸರ್ಕಾರದ ಪಾತ್ರ ಏನೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚಿಸಿದ್ದಾರೆ.
ದರ ನಿರ್ಧಾರದಲ್ಲಿ ಕೇಂದ್ರ ಸರ್ಕಾರ ನೇಮಿಸುವ ಸಮಿತಿಯದ್ದೇ ನಿಜವಾದ ಪಾತ್ರ ಎಂದು ಅವರು ದಾಖಲೆಯೊಂದನ್ನು ಹಂಚಿಕೊಂಡು ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಮೆಟ್ರೊ ಪ್ರಯಾಣ ದರ ಏರಿಕೆಯನ್ನು ಪುನರ್ ಪರಿಶೀಲಿಸುವಂತೆ ನಾನು ಔಪಚಾರಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ. ದೈನಂದಿನ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ, ಕಡಿಮೆ ಆದಾಯ ಹೊಂದಿದವರಿಗೆ ಹೆಚ್ಚಿನ ಪ್ರಯಾಣ ದರ ಪಾವತಿಸುವುದು ಕಷ್ಟ. ಹೀಗಾಗಿ ಇವರಿಗಾದರೂ ದರ ಕಡಿಮೆ ಆಗಬೇಕೆಂಬುದು ನನ್ನ ಆಗ್ರಹವಾಗಿದೆ ಎಂದಿದ್ದಾರೆ.
ದುರಾದೃಷ್ಟವಶಾತ್, ರಾಜ್ಯದ ಬಿಜೆಪಿ ಸಂಸದರು, ಅದರ ನಾಯಕರು ದೆಹಲಿಯಲ್ಲಿ ಕರ್ನಾಟಕದ ಹಿತಾಸಕ್ತಿ ರಕ್ಷಿಸುವಲ್ಲಿ ವಿಫಲವಾಗಿದ್ದಾರೆ. ಇದರ ಪರಿಣಾಮ ಜನ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದರೆ, ನಾವು ಯಾವಾಗಲೂ ಕನ್ನಡಿಗರೊಂದಿಗೆ ಬೆಂಗಳೂರು ಜನರೊಂದಿಗೆ ನಿಂತುಕೊಳ್ಳಲು ಬಯಸುತ್ತೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.