ADVERTISEMENT

ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಸಂಚಾರ ಮಾರ್ಗ ಬದಲಾವಣೆ

‘ನಮ್ಮ ಮೆಟ್ರೊ’ ಹಳದಿ ಮಾರ್ಗದ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2025, 23:09 IST
Last Updated 8 ಆಗಸ್ಟ್ 2025, 23:09 IST
<div class="paragraphs"><p>ಪ್ರಜಾವಾಣಿ ಚಿತ್ರ/ ಪ್ರಶಾಂತ್‌ ಎಚ್.ಜಿ</p></div>
   

ಪ್ರಜಾವಾಣಿ ಚಿತ್ರ/ ಪ್ರಶಾಂತ್‌ ಎಚ್.ಜಿ

ಬೆಂಗಳೂರು: 'ನಮ್ಮ ಮೆಟ್ರೊ’ದ ಹಳದಿ ಮಾರ್ಗವನ್ನು ಆಗಸ್ಟ್‌ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದು, ಹಲವು ಮಾರ್ಗಗಳಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಜತೆಗೆ, ವಾಹನಗಳ ನಿಲುಗಡೆ ಸಹ ನಿಷೇಧಿಸಲಾಗಿದೆ.

ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರೇನಹಳ್ಳಿ ಮುಖ್ಯರಸ್ತೆಯ ರಾಗಿಗುಡ್ಡ ಮೆಟ್ರೊ ನಿಲ್ದಾಣದ ಬಳಿ ಹಳದಿ ಮಾರ್ಗದ ಉದ್ಘಾಟನಾ ಸಮಾರಂಭ ನಡೆಯಲಿದೆ. ಪ್ರಧಾನಿ ಮೋದಿ ಸೇರಿದಂತೆ ಹಲವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಸಂಚಾರ ಮಾರ್ಗವನ್ನು ಮಾರ್ಪಾಡು ಮಾಡಲಾಗಿದೆ.

ADVERTISEMENT

ಸಂಚಾರ ನಿರ್ಬಂಧ: ಅಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಮಾರೇನಹಳ್ಳಿ ಮುಖ್ಯರಸ್ತೆಯ ರಾಜಲಕ್ಷ್ಮಿ ಜಂಕ್ಷನ್‌ನಿಂದ ಮಾರೇನಹಳ್ಳಿ 18ನೇ ಮುಖ್ಯರಸ್ತೆಯ ವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಮಾರೇನಹಳ್ಳಿ ಈಸ್ಟ್ ಎಂಡ್ ಮುಖ್ಯರಸ್ತೆಯ ಜಂಕ್ಷನ್‌ನಿಂದ ಆರವಿಂದ ಜಂಕ್ಷನ್‌ವರೆಗೂ ಸಂಚಾರ ನಿರ್ಬಂಧಿಸಲಾಗಿದೆ.

ಬೆಳಿಗ್ಗೆ 11.30ರಿಂದ ಮಧ್ಯಾಹ್ನ 2.30ರ ವರೆಗೆ ಸಿಲ್ಕ್ ಬೋರ್ಡ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ ಮತ್ತು ಹೊಸೂರು ರಸ್ತೆಯ ಮೂಲಕ ಹೊಸೂರು ಕಡೆಗೆ ಹಾಗೂ ಹೊಸೂರು ಕಡೆಯಿಂದ ಬೆಂಗಳೂರು ನಗರದ ಕಡೆಗೆ, ಎಲೆಕ್ಟ್ರಾನಿಕ್ ಸಿಟಿ 1ನೇ ಹಂತದ ಇನ್ಫೊಸಿಸ್‌ ಅವೆನ್ಯೂ, ವೇಲಾಂಕಣಿ ರಸ್ತೆ, ಎಚ್‌.ಪಿ ಅವೆನ್ಯೂ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.