
ಬೆಂಗಳೂರು: ‘ನಮ್ಮ ಮೆಟ್ರೊ’ ಗುಲಾಬಿ ಮಾರ್ಗದ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಜೆ. ರವಿಶಂಕರ್ ಸೂಚನೆ ನೀಡಿದರು.
ಗುಲಾಬಿ ಮಾರ್ಗದ ಕಾಮಗಾರಿಯನ್ನು ಶುಕ್ರವಾರ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಎತ್ತರಿಸಿದ ಮಾರ್ಗದ ನಿಲ್ದಾಣಗಳ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಭೂಗತ ವಿಭಾಗದಲ್ಲಿ ಎಂ.ಜಿ. ರಸ್ತೆ–ಶಿವಾಜಿನಗರ ಮತ್ತು ಟ್ಯಾನರಿ ರಸ್ತೆ–ವೆಂಕಟೇಶಪುರ ನಡುವೆ ಸುರಂಗ ಮಾರ್ಗ ಮತ್ತು ನಿಲ್ದಾಣಗಳ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.
ನಮ್ಮ ಮೆಟ್ರೊ ರೀಚ್–6ರ ಕೊತ್ತನೂರು ಡಿಪೊ ಸಿದ್ಧತೆಯನ್ನು ಪರಿಶೀಲಿಸಿದರು. ಕಾಳೇನ ಅಗ್ರಹಾರ–ನಾಗವಾರ ನಡುವಿನ ಗುಲಾಬಿ ಮಾರ್ಗದ ಮೆಟ್ರೊ ರೈಲುಗಳ ನಿರ್ವಹಣೆ ಈ ಡಿಪೊದಲ್ಲಿ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.