ADVERTISEMENT

ನಮ್ಮ ಮೆಟ್ರೊ: ‍ಮಹಿಳೆಯರ ಫೋಟೊ ತೆಗೆದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌!

​ಪ್ರಜಾವಾಣಿ ವಾರ್ತೆ
Published 21 ಮೇ 2025, 16:26 IST
Last Updated 21 ಮೇ 2025, 16:26 IST
<div class="paragraphs"><p>&nbsp;ನಮ್ಮ ಮೆಟ್ರೊ</p></div>

 ನಮ್ಮ ಮೆಟ್ರೊ

   

ಬೆಂಗಳೂರು: ‘ನಮ್ಮ ಮೆಟ್ರೊ’ದಲ್ಲಿ ಪ್ರಯಾಣಿಸುವ ಮಹಿಳೆಯರ ದೇಹದ ಭಾಗಗಳ ಚಿತ್ರಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನ metro_chicks(Bangalore metro clicks) ಹೆಸರಿನ ಖಾತೆಯಲ್ಲಿ ಹರಿಯಬಿಟ್ಟಿದ್ದ ಆರೋಪಿ ವಿರುದ್ಧ ದಕ್ಷಿಣ ವಿಭಾಗದ ಬನಶಂಕರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬನಶಂಕರಿ ಪೊಲೀಸ್ ಠಾಣೆಯ ಪಿಎಸ್ಐ ಬಿ.ಶಿವಶಂಕರ ಅವರು ಸಾಮಾಜಿಕ ಜಾಲತಾಣ ಪರಿಶೀಲನೆ ಮಾಡುತ್ತಿದ್ದ ಸಂದರ್ಭದಲ್ಲಿ ಇನ್‌ಸ್ಟಾಗ್ರಾಂನಲ್ಲಿ metro_chicks ಖಾತೆಯಲ್ಲಿ ಅಪರಿಚಿತ ವ್ಯಕ್ತಿಗಳು ವಿಡಿಯೊ ಹಾಕಿದ್ದು ಕಂಡುಬಂದಿತ್ತು. ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಆರೋಪಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ–2008 ಹಾಗೂ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್‌ 78(2)ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದರು.

‘ವಿಡಿಯೊ ಮಾಡಿದವರು ಹಾಗೂ ಅದನ್ನು ಅಪ್‌ಲೋಡ್‌ ಮಾಡಿದವರ ಪತ್ತೆ ಕಾರ್ಯ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ತಿಳಿಸಿದರು.

‘ಅಪರಿಚಿತ ವ್ಯಕ್ತಿಗಳು, ನಮ್ಮ ಮೆಟ್ರೊದಲ್ಲಿ ಸಂಚರಿಸುವ ಮಹಿಳೆಯರ ಮತ್ತು ಮೆಟ್ರೊ ನಿಲ್ದಾಣದಗಳಲ್ಲಿ ನಡೆದುಕೊಂಡು ಹೋಗುತ್ತಿರುವ ಮಹಿಳೆಯರನ್ನು ಹಿಂಬಾಲಿಸಿಕೊಂಡು ಹೋಗಿ ಅವರ ದೇಹದ ಮುಂಭಾಗ, ಹಿಂಭಾಗದ  ವಿಡಿಯೊ ಚಿತ್ರೀಕರಣ ಮಾಡಿ, ಈ ವಿಡಿಯೊಗಳನ್ನು metro_chicks ಎಂಬ ಖಾತೆಯಲ್ಲಿ ಅಪ್‌ಲೋಡ್‌ ಮಾಡಿರುವುದು ಕಂಡುಬಂದಿದೆ. ಈ ಖಾತೆಯಲ್ಲಿ ಒಟ್ಟು 14 ವಿಡಿಯೊಗಳಿದ್ದವು’ ಎಂದು ಪೊಲೀಸರು ಹೇಳಿದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಿದ್ದಂತೆಯೇ ಇನ್‌ಸ್ಟಾಗ್ರಾಂನಲ್ಲಿದ್ದ 14 ವಿಡಿಯೊಗಳನ್ನೂ ಡಿಲಿಟ್ ಮಾಡಲಾಗಿದೆ. ಮೆಟ್ರೊ ನಿಲ್ದಾಣಗಳಲ್ಲಿ ಸಂಚರಿಸುವ, ನಿದ್ರಿಸುತ್ತಿರುವ, ಸ್ನೇಹಿತರ ಜತೆಗೆ ಆಪ್ತವಾಗಿರುವ ವಿಡಿಯೊಗಳನ್ನು ಈ ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.