ADVERTISEMENT

16ರಂದು ಆರ್.ವಿ.ರೋಡ್‌– ಯಲಚೇನಹಳ್ಳಿ ನಡುವೆ ಮೆಟ್ರೊ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 15:32 IST
Last Updated 13 ಫೆಬ್ರುವರಿ 2020, 15:32 IST
   

ಬೆಂಗಳೂರು: ‘ನಮ್ಮ ಮೆಟ್ರೊ’ ಎರಡನೇ ಹಂತದ ಯಲಚೇನಹಳ್ಳಿ–ಅಂಜನಾಪುರ ನಿಲ್ದಾಣದವರೆಗಿನ ವಿಸ್ತರಿತ ಮಾರ್ಗದಲ್ಲಿ (ರೀಚ್‌ 4) 33 ಕೆವಿ ವಿದ್ಯುತ್‌ ಕೇಬಲ್‌ ಅಳವಡಿಸುತ್ತಿರುವುದರಿಂದ, ಹಸಿರು ಮಾರ್ಗದ ಆರ್.ವಿ. ರಸ್ತೆ ಮತ್ತು ಯಲಚೇನಹಳ್ಳಿ ನಿಲ್ದಾಣಗಳ ನಡುವೆ ಇದೇ 16ರ ಭಾನುವಾರ ಮೆಟ್ರೊ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

‘ಈ ಎರಡು ನಿಲ್ದಾಣಗಳ ನಡುವೆ ಮಾತ್ರ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳಿಸಲಾಗುತ್ತಿದ್ದು, ನಾಗಸಂದ್ರ ನಿಲ್ದಾಣದಿಂದ ಆರ್.ವಿ. ರಸ್ತೆ ಮೆಟ್ರೊ ನಿಲ್ದಾಣದವರೆಗೆ ಎಂದಿನಂತೆ ರೈಲು ಸಂಚರಿಸಲಿದೆ’ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮವು ಹೇಳಿದೆ. ನೇರಳೆ ಮಾರ್ಗದಲ್ಲಿ, ಎಂದಿನಂತೆ ಮೆಟ್ರೊ ರೈಲುಗಳು ಸಂಚರಿಸಲಿವೆ.

ಇದೇ 17ರ ಸೋಮವಾರದಿಂದ ನಾಗಸಂದ್ರ ಮತ್ತು ಯಲಚೇನಹಳ್ಳಿ ನಿಲ್ದಾಣಗಳ ನಡುವೆ ಬೆಳಿಗ್ಗೆ 5ರಿಂದ ಎಂದಿನಂತೆ ರೈಲುಗಳ ಸಂಚಾರ ಆರಂಭವಾಗಲಿದೆ ಎಂದೂ ನಿಗಮ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.