ADVERTISEMENT

ನಮ್ಮ ಮೆಟ್ರೊ ಹಳದಿ ಮಾರ್ಗ: ಇಂದಿನಿಂದ 4ನೇ ರೈಲು ಸಂಚಾರ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 23:20 IST
Last Updated 9 ಸೆಪ್ಟೆಂಬರ್ 2025, 23:20 IST
ನಮ್ಮ ಮೆಟ್ರೊ ಹಳದಿ ಮಾರ್ಗ
ನಮ್ಮ ಮೆಟ್ರೊ ಹಳದಿ ಮಾರ್ಗ   

ಬೆಂಗಳೂರು: ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ಬುಧವಾರದಿಂದ ಪ್ರತಿ 19 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸಲಿವೆ.

ಹಳದಿ ಮಾರ್ಗದಲ್ಲಿ ನಾಲ್ಕನೇ ರೈಲಿನ ಸಂಚಾರ ಬುಧವಾರ ಆರಂಭವಾಗಲಿದೆ. ಇದರಿಂದಾಗಿ ಪ್ರತಿ ಟ್ರಿಪ್‌ನ ಅಂತರ 25 ನಿಮಿಷದಿಂದ 19 ನಿಮಿಷಕ್ಕೆ ಇಳಿಯಲಿದೆ.

ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 6.30ರ ಬದಲು 6 ಗಂಟೆಯಿಂದಲೇ ಸಂಚಾರ ಶುರುವಾಗಲಿದೆ. ಭಾನುವಾರ ಮಾತ್ರ ಬೆಳಿಗ್ಗೆ 7ಕ್ಕೆ ರೈಲುಗಳ ಸಂಚಾರ ಆರಂಭವಾಗಲಿದೆ. ನಾಲ್ಕನೇ ರೈಲು ಸಂಚಾರ ಆರಂಭವಾಗುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.