ADVERTISEMENT

ಆ.10ರಂದು ಪ್ರಧಾನಿ ನರೇಂದ್ರ ಮೋದಿಯಿಂದ 'ನಮ್ಮ ಮೆಟ್ರೊ ಹಳದಿ ಮಾರ್ಗ' ಉದ್ಘಾಟನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಆಗಸ್ಟ್ 2025, 4:48 IST
Last Updated 3 ಆಗಸ್ಟ್ 2025, 4:48 IST
<div class="paragraphs"><p>ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ ಪೂರೈಕೆಯಾಗಿರುವ ರೈಲು </p></div>

ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ ಪೂರೈಕೆಯಾಗಿರುವ ರೈಲು

   

ಬೆಂಗಳೂರು: ನಗರದ ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರ ನಡುವಿನ ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ 10ರಂದು ಹಸಿರು ನಿಶಾನೆ ತೋರಿಸಲಿದ್ದಾರೆ.

ಈ ಬಗ್ಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್‌ ಲಾಲ್‌ ಖಟ್ಟರ್‌ ಹಾಗೂ ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 

ADVERTISEMENT

ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ರೈಲು ಸಂಚಾರದಿಂದ ಸುಮಾರು 8 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿವೆ. ಇದು ಸಿಲ್ಕ್ ಬೋರ್ಡ್ ಸಂಚಾರ ದಟ್ಟಣೆ ಸಮಸ್ಯೆಯನ್ನು ಬಹುಮಟ್ಟಿಗೆ ಪರಿಹರಿಸಲಿದೆ. ಸಾರ್ವಜನಿಕ ಸಾರಿಗೆ ಬಳಕೆ ಮಾತ್ರವೇ ಸಂಚಾರ ದಟ್ಟಣೆ ಇಳಿಕೆಗೆ ಉತ್ತಮ ಪರಿಹಾರವಾಗಿದೆ.

ನಮ್ಮ ನಗರದ ಮೂಲಭೂತ ಸೌಕರ್ಯಗಳಿಗೆ ಸದಾ ಆದ್ಯತೆ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರಿನ ನಿವಾಸಿಗಳ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತೇಜಸ್ವಿ ಸೂರ್ಯ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರ ಸಂಪರ್ಕಿಸುವ ಈ ಮಾರ್ಗದಲ್ಲಿ ಸಂಚಾರ ಆರಂಭಿಸಲು ರೈಲ್ವೆಯ ಮೆಟ್ರೊ ರೈಲು ಸುರಕ್ಷತಾ ಆಯೋಗ (ಸಿಎಂಎಸ್‌ಆರ್‌) ಅನುಮತಿ ನೀಡಿದೆ. ಮೆಟ್ರೊ ರೈಲು ಸುರಕ್ಷತೆ ದಕ್ಷಿಣ ವೃತ್ತದ ಆಯುಕ್ತ ಅನಂತ್‌ ಮಧುಕರ್‌ ಚೌಧರಿ ನೇತೃತ್ವದ ತಂಡವು ಜುಲೈ 22ರಿಂದ 25ರವರೆಗೆ ವಿವಿಧ ಪರೀಕ್ಷೆಗಳನ್ನು ನಡೆಸಿತ್ತು.

19.15 ಕಿ.ಮೀ ಉದ್ದದ ಹಳದಿ ಮಾರ್ಗಕ್ಕೆ ಈಗಾಗಲೇ ಮೂರು ರೈಲುಗಳು ಬಂದಿವೆ. ಪಶ್ಚಿಮ ಬಂಗಾಳದ ಟಿಟಾಗಢ ರೈಲ್ ಸಿಸ್ಟಂ ಲಿಮಿಟೆಡ್‌ (ಟಿಆರ್‌ಎಸ್‌ಎಲ್‌) ಕಾರ್ಯಾಗಾರದಿಂದ ನಾಲ್ಕನೇ ರೈಲು ಕಳುಹಿಸಿದ್ದು, ಅದು ಆಗಸ್ಟ್‌ 10ರ ಒಳಗೆ ಬೆಂಗಳೂರು ತಲುಪಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.