ADVERTISEMENT

ಹಳದಿ ಮಾರ್ಗ: ಹಳಿಗೆ ಬಿದ್ದ ಭದ್ರತಾ ಸಿಬ್ಬಂದಿ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 14:22 IST
Last Updated 26 ಆಗಸ್ಟ್ 2025, 14:22 IST
ಹಳಿಗೆ ಬೀಳುತ್ತಿರುವ ಭದ್ರತಾ ಸಿಬ್ಬಂದಿ 
ಹಳಿಗೆ ಬೀಳುತ್ತಿರುವ ಭದ್ರತಾ ಸಿಬ್ಬಂದಿ    

ಬೆಂಗಳೂರು: ‘ನಮ್ಮ ಮೆಟ್ರೊ’ದ ಹಳದಿ ಮಾರ್ಗದ ಹಳಿಗೆ ಭದ್ರತಾ ಸಿಬ್ಬಂದಿಯೊಬ್ಬರು ಆಕಸ್ಮಿಕವಾಗಿ ಬಿದ್ದಿದ್ದು, ಅವರನ್ನು ಪ್ರಯಾಣಿಕರು ರಕ್ಷಿಸಿದ್ದಾರೆ. ರಾಗಿಗುಡ್ಡ ಮೆಟ್ರೊ ನಿಲ್ದಾಣದಲ್ಲಿ ಮಂಗಳವಾರ ಬೆಳಿಗ್ಗೆ ಘಟನೆ ನಡೆದಿದೆ.

ಮೆಟ್ರೊ ನಿಲ್ದಾಣದಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಘಟನೆ ದೃಶ್ಯವು ಸೆರೆಯಾಗಿದೆ.

ಹಳಿ ಮೇಲೆ ಭದ್ರತಾ ಸಿಬ್ಬಂದಿ ಬೀಳುತ್ತಿರುವುದನ್ನು ಗಮನಿಸಿದ ಮತ್ತೊಂದು ಬದಿಯಲ್ಲಿ ಕೆಲಸ ಮಾಡುತ್ತಿದ್ದ ಭದ್ರತಾ ಸಿಬ್ಬಂದಿ, ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಿದರು. ಬಳಿಕ ಅವರನ್ನು ಮೇಲಕ್ಕೆ ಎತ್ತಲಾಯಿತು.

ADVERTISEMENT

52 ವರ್ಷದ ಭದ್ರತಾ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ. ಅಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ್ದರಿಂದ ಹಳದಿ ಮಾರ್ಗದಲ್ಲಿ ಮೆಟ್ರೊ ಸಂಚಾರವು ಆರು ನಿಮಿಷ ವ್ಯತ್ಯಯ ಆಗಿತ್ತು ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿ ಹೆಚ್ಚಿನ ಅವಧಿ ಕೆಲಸ ಮಾಡಿದ್ದರು. ನಿದ್ರೆಯ ಮಂಪರಿನಲ್ಲಿ ಹಳಿಯ ಮೇಲೆ ಬಿದ್ದಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.