
ಪ್ರಜಾವಾಣಿ ವಾರ್ತೆ
ನಮ್ಮ ಮೆಟ್ರೊ ಹಳದಿ ಮಾರ್ಗ
ಬೆಂಗಳೂರು: ಆರ್.ವಿ. ಕಾಲೇಜ್‌ನಿಂದ ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದಲ್ಲಿ ದಟ್ಟಣೆ ಅವಧಿಯಲ್ಲಿ ಮೆಟ್ರೊ ರೈಲುಗಳು ಜ.15ರಿಂದ ಪ್ರತಿ 10 ನಿಮಿಷಕ್ಕೊಮ್ಮೆ ಸಂಚರಿಸಲಿವೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ತಿಳಿಸಿದೆ.
ಸೋಮವಾರದಿಂದ ಶನಿವಾರದವರೆಗೆ ಸದ್ಯ ಪ್ರತಿ 13 ನಿಮಿಷಕ್ಕೆ ಒಂದು ರೈಲು ಸಂಚರಿಸುತ್ತಿದೆ. ಇದು 10 ನಿಮಿಷಕ್ಕೆ ಕಡಿತವಾಗಲಿದೆ. ಭಾನುವಾರದಂದು 15 ನಿಮಿಷದ ಬದಲು 14 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ ಎಂದು ತಿಳಿಸಲಾಗಿದೆ.
ಈ ಮಾರ್ಗದಲ್ಲಿ ಏಳನೇ ರೈಲು ಸಂಚರಿಸುವುದರಿಂದ ಸಮಯದಲ್ಲಿ ಕಡಿತವಾಗಲಿದೆ. ಆದರೆ ಮೊದಲ ಹಾಗೂ ಕೊನೆಯ ರೈಲು ಸಂಚಾರದ ಸಮಯದಲ್ಲಿ ವ್ಯತ್ಯಾಸ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.