
ಕೆಂಗೇರಿ ಮೆಟ್ರೊ ನಿಲ್ದಾಣದಲ್ಲಿ ರೈಲಿನಡಿಗೆ ಹಾರಿ ಯುವಕ ಆತ್ಮಹತ್ಯೆ
ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗದ ಕೆಂಗೇರಿ ನಿಲ್ದಾಣದಲ್ಲಿ ಶುಕ್ರವಾರ ಯುವಕನೊಬ್ಬ ಮೆಟ್ರೊ ರೈಲು ಬರುವಾಗ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಿಜಯಪುರ ಮೂಲದ ಶಾಂತನಗೌಡ ಪಾಟೀಲ ಎಂದು ಗುರುತಿಸಲಾಗಿದ್ದೆ. ಸಾವಿಗೆ ಕಾರಣಗಳು ಇನ್ನಷ್ಟೇ ಗೊತ್ತಾಗಬೇಕಿದೆ.
ಈ ಘಟನೆಯಿಂದ ಮೆಟ್ರೊ ಸಂಚಾರದಲ್ಲಿ ವ್ಯತ್ಯಾಯ ಉಂಟಾಗಿತ್ತು. ನೇರಳೆ ಮಾರ್ಗದ ರೈಲುಗಳು ಮೈಸೂರು ರಸ್ತೆ ಮೆಟ್ರೊ ನಿಲ್ದಾಣದವರೆಗೆ ಸಂಚರಿಸಿದ್ದವು.
ಸದ್ಯ ಮತ್ತೆ ಚಲ್ಲಘಟ್ಟವರೆಗೆ ಮೆಟ್ರೊ ಸಂಚಾರ ಪುನರಾಂಭವಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಜ್ಞಾನಭಾರತಿ ಮತ್ತು ಚಲ್ಲಘಟ್ಟ ನಡುವಿನ ಮೆಟ್ರೋ ಸೇವೆಗಳು ಇಂದು ಬೆಳಿಗ್ಗೆ 09:40 ಗಂಟೆಯಿಂದ ಸಂಪೂರ್ಣವಾಗಿ ಪುನರ್ ಆರಂಭಿಸಲಾಗಿದೆ. ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲುಗಳು ಈಗ ಎಂದಿನಂತೆ ಸಂಚರಿಸುತ್ತಿವೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.