ADVERTISEMENT

ನರಗುಂದ ಹೆಚ್ಚುವರಿ ಸಾಲಿಸಿಟರ್ ಜನರಲ್‌

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 19:40 IST
Last Updated 16 ಡಿಸೆಂಬರ್ 2019, 19:40 IST
ಎಂ.ಬಿ.ನರಗುಂದ
ಎಂ.ಬಿ.ನರಗುಂದ   

ಬೆಂಗಳೂರು: ಹೈಕೋರ್ಟ್‌ನಹಿರಿಯ ವಕೀಲ ಎಂ.ಬಿ.ನರಗುಂದ ಅವರನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್‌ (ಎಎಸ್‌ಜೆಐ) ಆಗಿ ಕೇಂದ್ರ ಸರ್ಕಾರ ಸೋಮವಾರ ನೇಮಕ ಮಾಡಿದೆ.

ರಾಜ್ಯ ಹೈಕೋರ್ಟ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ನರಗುಂದ ನಿರ್ವಹಿಸಲಿದ್ದಾರೆ. ಅವರ ಅಧಿಕಾರ ಅವಧಿ ಮೂರು ವರ್ಷ.

ಹಿಂದಿನ ಎಎಸ್‌ಜಿಐ ಆಗಿದ್ದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆಬಂದ ನಂತರ ರಾಜ್ಯ ಅಡ್ವಕೇಟ್‌ಜನರಲ್ ಆಗಿ ನೇಮಕಗೊಂಡಿದ್ದರು. ನಂತರ ತೆರವುಗೊಂಡಿದ್ದ ಹುದ್ದೆಗೆ ಈ ನೇಮಕ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.