ಬೆಂಗಳೂರು: ನಾರಾಯಣ ಎಜುಕೇಷನಲ್ ಇನ್‌ಸ್ಟಿಟ್ಯೂಷನ್ಸ್ ವೈಟ್‌ಫೀಲ್ಡ್‌ನಲ್ಲಿರುವ ಎಂಐಎಲ್‌ಆರ್ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡ ‘ಸಕ್ಸಸ್ ಒಡಿಸ್ಸಿ’ ಕಾರ್ಯಕ್ರಮದಲ್ಲಿ ಯುವ ಸಾಧಕರೊಂದಿಗೆ ಸಂಭ್ರಮಾಚರಣೆ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿವಿಧೆಡೆ ಇರುವ ನಾರಾಯಣ ಸಮೂಹದ ಶಾಲೆಗಳ ಸುಮಾರು ಸಾವಿರ ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಚರ್ಚಾಗೋಷ್ಠಿಗಳೂ ನಡೆದವು. ಅಮೆರಿಕದ ಸ್ಪೆಲ್ಲಿಂಗ್ ಬಿ ಸ್ಪರ್ಧೆಯ ಅಂತಿಮ ಸುತ್ತಿನ ಸ್ಪರ್ಧಿ ಮಾಸ್ಟರ್ ಆಕಾಶ್ ವುಕೋಟಿ ಜತೆಗೆ ಜೆಇಇ, ನೀಟ್, ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಹಾಗೂ ಬೋರ್ಡ್ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಸಂಸ್ಥೆಯ 17 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ನಾರಾಯಣ ಎಜುಕೇಷನಲ್ ಇನ್‌ಸ್ಟಿಟ್ಯೂಷನ್ಸ್ ಅಧ್ಯಕ್ಷ ಪುನೀತ್ ಕೊತ್ತಪ್ಪ ಅವರು, ಸಂಸ್ಥೆಯ ಬದ್ಧತೆ ಹಾಗೂ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಬಗ್ಗೆ ತಿಳಿಸಿದರು. ‘ಕಿರಿಯ ವಯಸ್ಸಿಯಲ್ಲಿಯೇ ಯಶಸ್ಸು ಸಾಧಿಸಿದ’ ಬಗ್ಗೆ ಸಂಸ್ಥೆಯ ಯುವ ಸಾಧಕರು ಮನದಾಳದ ಮಾತುಗಳನ್ನು ಹಂಚಿಕೊಂಡರು.
ನೀಟ್ ಪರೀಕ್ಷೆಯಲ್ಲಿ 720 ಅಂಕದೊಂದಿಗೆ ಪ್ರಥಮ ರ್‍ಯಾಂಕ್ ಪಡೆದಿದ್ದ ಸ್ಯಾಮ್ ಜೋಸೆಫ್, ಸಿಇಟಿಯಲ್ಲಿ ನಾಲ್ಕನೇ ರ್‍ಯಾಂಕ್ ಪಡದ ಸನಾ ತಬಸ್ಸುಮ್ ಸೇರಿ ಸಂಸ್ಥೆಯ ಹಲವು ಸಾಧಕರು ಮಾತನಾಡಿ, ‘ಕಠಿಣ ಪರಿಶ್ರಮ ಹಾಗೂ ಪ್ರಯತ್ನದಿಂದ ಯಶಸ್ಸು ಸಾಧ್ಯ. ರಾತ್ರೊ ರಾತ್ರಿ ಯಶಸ್ಸು ಸಾಧಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.