
ಪ್ರಜಾವಾಣಿ ವಾರ್ತೆ
ಬೆಂಗಳೂರು: ಹಿಂದುಳಿದ ವರ್ಗಗಳ ಮಾನ್ಯತೆ ಪಡೆದಿರುವ ಸಂಪಾದಕರ ಮತ್ತು ವರದಿಗಾರರ ಸಂಘ ನೀಡುವ ‘ಬ್ರಹ್ಮಶ್ರೀ ನಾರಾಯಣ ಗುರು’ ಪ್ರಶಸ್ತಿಗೆ ಐವರು ಆಯ್ಕೆಯಾಗಿದ್ದಾರೆ.
ಸಹಕಾರ ಕ್ಷೇತ್ರದಿಂದ ಸರೋಜಾ ಬನ್ನಪ್ಪ, ಸಮಾಜಸೇವೆ ಕ್ಷೇತ್ರದಿಂದ ಎಚ್.ಆರ್. ಜಯರಾಮ್, ವೈದ್ಯಕೀಯ ಕ್ಷೇತ್ರದಿಂದ ಡಾ.ನಾಗೇಶ್ ಬಸವರಾಜ, ಸಂಕೀರ್ಣ ಕ್ಷೇತ್ರದಿಂದ ಪುಂಡಲೀಕ ಕಲ್ಲಿಗನೂರ, ಸಮಾಜಸೇವಾ ಕ್ಷೇತ್ರದಿಂದ ಅಮಿತಾ ಆನಂದ್ ಆಯ್ಕೆಯಾಗಿದ್ದಾರೆ.
ಇದೇ 23ರಂದು ಬೆಳಿಗ್ಗೆ 11 ಗಂಟೆಗೆ ಶೇಷಾದ್ರಿಪುರದಲ್ಲಿರುವ ಗ್ರೀನ್ ಪಾಥ್ ಹೋಟೆಲ್‌ನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಗಂದರ್ವ ಶ್ರೀನಿವಾಸ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.