ADVERTISEMENT

‘ಪಿಎಂ ನರೇಂದ್ರ ಮೋದಿ’ ಚಿತ್ರ ಬಿಡುಗಡೆಗೆ ತಡೆ ಕೋರಿ ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2019, 19:43 IST
Last Updated 2 ಏಪ್ರಿಲ್ 2019, 19:43 IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಚರಿತ್ರೆ ಆಧರಿಸಿದ ‘ಪಿಎಂ ನರೇಂದ್ರ ಮೋದಿ’ ಶೀರ್ಷಿಕೆಯ ಚಲನಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ತುಮಕೂರು ಜಿಲ್ಲೆಯ ಉರಡಿಗೆರೆ ಹೋಬಳಿ ಕದರನಹಳ್ಳಿ ತಾಂಡ್ಯದ ವಕೀಲ ಎಲ್‌.ರಮೇಶ್‌ ನಾಯಕ್ ಸಲ್ಲಿಸಿರುವ ಈ ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.

‘ಚಿತ್ರದ ಟ್ರೇಲರ್ ಗಮನಿಸಿದರೆ ಇದು ಪಕ್ಷದ ಅಭ್ಯರ್ಥಿಯ ಪರ ಪ್ರಚಾರ ಮಾಡುವಂತಿದೆ. ಅಂತೆಯೇ ಇದು ಮತದಾರರ ಮೇಲೆ ಪರಿಣಾಮ ಬೀರುವಂತಿದೆ. ಸದ್ಯ 17ನೇ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದೆ. ಆದ್ದರಿಂದ, ಚುನಾವಣೆ ಪ್ರಕ್ರಿಯೆ ಮುಗಿಯುವತನಕ ರಾಜ್ಯದ ಯಾವುದೇ ಭಾಗದಲ್ಲಿ ಚಿತ್ರ ಬಿಡುಗಡೆ ಮಾಡದಂತೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ADVERTISEMENT

ಮುಖ್ಯ ಚುನಾವಣಾಧಿಕಾರಿ, ಚಿತ್ರ ನಿರ್ಮಾಪಕರಾದ ಮುಂಬೈನ ಬ್ಲ್ಯೂ ಲೋಟಸ್‌ ಪ್ರೊಡಕ್ಷನ್‌ನ ಲೆಜೆಂಡ್‌ ಗ್ಲೋಬಲ್‌ ಸ್ಟುಡಿಯೊ ಪ್ರತಿನಿಧಿ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಇದೇ 5ರಂದು ಚಿತ್ರ ಬಿಡುಗಡೆಯಾಗಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.