ADVERTISEMENT

ಕ್ರೀಡೆಗೆ ಆದ್ಯತೆ ನೀಡಿದ ಮೋದಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2025, 23:00 IST
Last Updated 26 ಅಕ್ಟೋಬರ್ 2025, 23:00 IST
ಕ್ರೀಡಾ ಮಹೋತ್ಸವದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕ್ರೀಡಾ ಸಾಧಕರನ್ನು ಸನ್ಮಾನಿಸಿದರು. ಶಾಸಕ ಬೈರತಿ ಬಸವರಾಜ, ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ್, ಪಿ.ಜೆ.ಅಂತೋಣಿಸ್ವಾಮಿ ಇದ್ದರು.
ಕ್ರೀಡಾ ಮಹೋತ್ಸವದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕ್ರೀಡಾ ಸಾಧಕರನ್ನು ಸನ್ಮಾನಿಸಿದರು. ಶಾಸಕ ಬೈರತಿ ಬಸವರಾಜ, ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ್, ಪಿ.ಜೆ.ಅಂತೋಣಿಸ್ವಾಮಿ ಇದ್ದರು.    

ಕೆ.ಆರ್.ಪುರ: ಪ್ರಧಾನಿ ನರೇಂದ್ರ ಮೋದಿ ಅವರು ಕ್ರೀಡೆಗೆ ಮಹತ್ವ ಕೊಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. 

ಕೆ.ಆರ್.ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಂಸದ್ ಕ್ರೀಡಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡಾಪಟುಗಳಿಗೆ ಉತ್ತೇಜನ ನೀಡಿ, ಸಾಧಕರಿಗೆ ಪ್ರೋತ್ಸಾಹದಾಯಕ ಪ್ರಶಸ್ತಿ ನೀಡಲಾಗುತ್ತಿದೆ. 2036ರ ಒಲಿಂಪಿಕ್ ಕ್ರೀಡೆಯಲ್ಲಿ ಭಾರತ ಉತ್ತಮ ಸಾಧನೆ ಮಾಡಬೇಕು ಎನ್ನುವ ದೃಷ್ಟಿಕೋನ ಹೊಂದಿದ್ದಾರೆ ಎಂದರು.

ADVERTISEMENT

ಶಾಸಕ ಬೈರತಿ ಬಸವರಾಜ ಮಾತನಾಡಿ, ‘ಉತ್ತಮ ಆರೋಗ್ಯಕ್ಕೆ ಕ್ರೀಡೆ ಬಹಳ ಮುಖ್ಯ. ಬ್ಯಾಡ್ಮಿಂಟನ್‌ನಂತಹ ಕ್ರೀಡೆಗಳು ದೇಹಕ್ಕೆ ಉತ್ತಮ’ ಎಂದರು.

ಬೆಂಗಳೂರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್, ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ್, ಪಿ.ಜೆ.ಅಂತೋಣಿಸ್ವಾಮಿ, ಸಿದ್ದಲಿಂಗಯ್ಯ, ಲೋಕೇಶ್, ಮಾರ್ಕೆಟ್ ರಮೇಶ್, ಶ್ರೀರಾಮುಲು, ಶಿವಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.