
ಬೆಂಗಳೂರು: ದೃಷ್ಟಿ ಇಲ್ಲದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯ ಮೈಸೂರು ನಗರ ಸಾರಿಗೆಯ 200 ಬಸ್‌ಗಳಲ್ಲಿ ಜಾರಿಗೆ ತಂದಿರುವ ‘ಧ್ವನಿ ಸ್ಪಂದನ– ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್’ ಯೋಜನೆಗೆ ಭಾರತ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯವು ‘ಅವಾರ್ಡ್ ಆಫ್ ಎಕ್ಸಲೆನ್ಸ್ ಇನ್ ಅರ್ಬನ್ ಟ್ರಾನ್ಸ್‌ಪೋರ್ಟ್’ ರಾಷ್ಟ್ರೀಯ ಪ್ರಶಸ್ತಿ ನೀಡಿದೆ.
ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್, ಅದೇ ಖಾತೆಯ ರಾಜ್ಯ ಸಚಿವ ತೋಕನ್ ಸಾಹು ಪ್ರಶಸ್ತಿ ಪ್ರದಾನ ಮಾಡಿದರು. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಪ್ರಶಸ್ತಿ ಸ್ವೀಕರಿಸಿದರು.
ಐಐಟಿ ದೆಹಲಿಯ ರೈಸ್ಡ್ ಲೈನ್ಸ್ ಫೌಂಡೇಷನ್ ಅಭಿವೃದ್ಧಿಪಡಿಸಿದ ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ತಂತ್ರಜ್ಞಾನವನ್ನು ಜರ್ಮನಿಯ ಜಿಇಝೆಡ್ ಸಂಸ್ಥೆಯ ಸಹಕಾರದೊಂದಿಗೆ ಅಳವಡಿಸಲಾಗಿತ್ತು. ಕಣ್ಣು ಕಾಣದ ಪ್ರಯಾಣಿಕರು ಬಸ್‌ಗಳನ್ನು ಗುರುತಿಸಲು ಹಾಗೂ ಧ್ವನಿ ಆಧಾರಿತ ಸೂಚನೆಗಳ ಮೂಲಕ ಬಸ್ ಪ್ರವೇಶದ ಸ್ಥಳವನ್ನು ಸುರಕ್ಷಿತವಾಗಿ ಕಂಡುಹಿಡಿಯಲು ಇದು ಸಹಾಯ ಮಾಡುತ್ತದೆ. 400ಕ್ಕೂ ಅಧಿಕ ಪ್ರಯಾಣಿಕರಿಗೆ ಇದರ ಬಳಕೆಯ ಬಗ್ಗೆ ತರಬೇತಿ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.