
ಹೆಸರಘಟ್ಟ: ಇಲ್ಲಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ಐಐಹೆಚ್ಆರ್) ಆವರಣದಲ್ಲಿ ರೈತ ದಿನ ಆಚರಿಸಲಾಯಿತು.
ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮಾಜಿ ಕುಲಪತಿ ನಾರಾಯಣಗೌಡ ಮಾತನಾಡಿ, ‘ಮಣ್ಣು ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ವಿವೇಚನೆಯಿಂದ ಬಳಸಬೇಕು. ಮಣ್ಣಿನಲ್ಲಿ ಸಾವಯವ ಇಂಗಾಲದ ಮಟ್ಟವನ್ನು 0.75 ಪ್ರತಿಶತಕ್ಕಿಂತ ಹೆಚ್ಚು ಕಾಪಾಡಿಕೊಳ್ಳಬೇಕು. ಕೃಷಿ ತ್ಯಾಜ್ಯ ಮತ್ತು ಕೀಟನಾಶಕಗಳು ಸೇರಿದಂತೆ ಕೃಷಿ ರಾಸಾಯನಿಕಗಳನ್ನು ಮಿತವಾಗಿ ಬಳಸುವ ಮೂಲಕ ಅದನ್ನು ಸುಸ್ಥಿರವಾಗಿ ನಿರ್ವಹಿಸಬೇಕು’ ಎಂದು ಹೇಳಿದರು.
ಐಐಎಚ್ಆರ್ ಅಭಿವೃದ್ಧಿಪಡಿಸಿದ ತಳಿಗಳು ಮತ್ತು ತಂತ್ರಜ್ಞಾನಗಳು ದೇಶದ ಆರ್ಥಿಕತೆಗೆ ಸಹಾಯಕವಾಗಲಿವೆ. ಸ್ವಾತಂತ್ರ್ಯದ ಸಮಯದಲ್ಲಿ 25 ದಶಲಕ್ಷ ಟನ್‌ಗಳಷ್ಟಿದ್ದ ತೋಟಗಾರಿಕಾ ಉತ್ಪನ್ನಗಳು ಇಂದು, ವಾರ್ಷಿಕ 365 ದಶಲಕ್ಷ ಟನ್‌ಗಳಷ್ಟು ಉತ್ಪಾದನೆಯಾಗುತ್ತಿವೆ ಎಂದರು.
ರೈತರಿಗೆ ನವೀನ ತಂತ್ರಜ್ಞಾನಗಳು ಮತ್ತು ಸುಧಾರಿತ ತಳಿಗಳನ್ನು ಒದಗಿಸುವ ಮೂಲಕ ಅವರನ್ನು ಸಬಲೀಕರಣಗೊಳಿಸಬೇಕು ಎಂದು ಸಂಸ್ಥೆಯ ನಿರ್ದೇಶಕ ಡಾ. ತುಷಾರ್ ಕಾಂತಿ ಬೆಹೆರಾ ವಿಜ್ಞಾನಿಗಳಿಗೆ ಸಲಹೆ ನೀಡಿದರು.
ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ನಡೆಯಿತು. ಹಣ್ಣು ಮತ್ತು ತರಕಾರಿ ಬೆಳೆಗಳಲ್ಲಿ ಹೊಸ ತಳಿಗಳ ಸಸಿಗಳು ಮತ್ತು ಬೀಜಗಳನ್ನು ರೈತರಿಗೆ ವಿತರಣೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.