ಬೆಂಗಳೂರು: ‘ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸಮಾನ ಅವಕಾಶಗಳಿವೆ. ಅವುಗಳ ಸದುಪಯೋಗ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಹೆಣ್ಣು ಮಗು ಮನೆಯ ನಂದಾ ದೀಪ ಇದ್ದಂತೆ. ಸ್ವಾತಂತ್ರ್ಯ, ಸಮಾನತೆ ಪ್ರತಿ ಹೆಣ್ಣು ಮಗುವಿಗೂ ಸಿಗಬೇಕು. ಸಮಾಜದಲ್ಲಿ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದುವರಿಯುತ್ತಿದ್ದಾರೆ. ಚಾಲಕನಿಂದ ಹಿಡಿದು ಪೈಲಟ್‌ವರೆಗೂ ಪುರುಷರಿಗೆ ಸರಿ ಸಮಾನವಾಗಿ ಬೆಳೆದಿರುವುದು ಸ್ತುತ್ಯಾರ್ಹ’ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಜಿ.ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವೀಂದ್ರನಾಥ ಮೇಟಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.