ಬೆಂಗಳೂರು: ರಜೆಯ ದಿನವೂ ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಿಸಿದರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್ಎಚ್ಎಂ) ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು, ರಜೆಯ ಬದಲು ಅಗತ್ಯ ಸೌಕರ್ಯ ನೀಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
2020ರ ಏ.2ರಿಂದ 2021ರ ಮಾರ್ಚ್ 31ರ ಅವಧಿಗೆ ನೇಮಕಾತಿ ಮುಂದುವರಿಸಲಾಗುತ್ತದೆ. ಈ ನಡುವೆ, ಒಂದು ದಿನ ವೇತನ ರಹಿತ ರಜೆಯನ್ನು ಎನ್‌ಎಚ್‌ಎಂ ನೀಡಿರುವುದು ನೌಕರರ ಆತಂಕಕ್ಕೆ ಕಾರಣವಾಗಿತ್ತು.
‘ಕೊರೊನಾ ವೈರಸ್ ತಡೆಗಟ್ಟುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ. ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದ ಹಿನ್ನಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದೇವೆ’ ಎಂದು ಕರ್ನಾಟಕ ರಾಜ್ಯ ಆರೋಗ್ಯ ಗುತ್ತಿಗೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ವಿಶ್ವಾರಾಧ್ಯ ಎಚ್. ಯಮೋಜಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.