ADVERTISEMENT

ನಿಮ್ಹಾನ್ಸ್: ಜನರ ಮಾನಸಿಕ ಸಮಸ್ಯೆ ಬಗ್ಗೆ ಸಮೀಕ್ಷೆ

ರಾಷ್ಟ್ರೀಯ ಮಾನಸಿಕ ಆರೋಗ್ಯ ಸಮೀಕ್ಷೆಯಡಿ ಅಧ್ಯಯನ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2021, 4:50 IST
Last Updated 11 ಡಿಸೆಂಬರ್ 2021, 4:50 IST
ಡಾ. ಪ್ರತಿಮಾ ಮೂರ್ತಿ
ಡಾ. ಪ್ರತಿಮಾ ಮೂರ್ತಿ   

ಬೆಂಗಳೂರು: ನಗರ ಪ್ರದೇಶಗಳ ಜನರ ಕೋವಿಡೋತ್ತರ ಮಾನಸಿಕ ಸ್ಥಿತಿಯ ಬಗ್ಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್‌) ಮುಂದಿನ ವರ್ಷರಾಷ್ಟ್ರೀಯ ಮಾನಸಿಕ ಆರೋಗ್ಯ ಸಮೀಕ್ಷೆಯಡಿ ಅಧ್ಯಯನ ಕೈಗೊಳ್ಳಲಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ನಿರ್ದೇಶಕಿ ಡಾ. ಪ್ರತಿಮಾಮೂರ್ತಿ, ‘ಕೇಂದ್ರ ಆರೋಗ್ಯ ಸಚಿವಾಲಯದ ಸಹಯೋಗದಲ್ಲಿ ಮುಂದಿನ ವರ್ಷ ಫೆಬ್ರುವರಿಯಲ್ಲಿ ಈ ಸಮೀಕ್ಷೆ ನಡೆಸಲಾಗುವುದು. ಎರಡನೇ ಹಂತದ ಈ ಸಮೀಕ್ಷೆಗೆ ಮಹಾನಗರಗಳು ಹಾಗೂ ಎರಡನೇ ಹಂತದ ನಗರಗಳು ಒಳಪಡಲಿವೆ’ ಎಂದು ತಿಳಿಸಿದರು.

‘ನವದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ, ಹೈದರಾಬಾದ್, ಕೋಲ್ಕತ್ತ ಮತ್ತು ಎರಡನೇ ಹಂತದ ನಗರಗಳಾದ ಹುಬ್ಬಳ್ಳಿ–ಧಾರವಾಡ ಹಾಗೂಮೈಸೂರಿನಲ್ಲಿ ತಲಾ 3,600 ಜನರನ್ನು ಸಮೀಕ್ಷೆಗೆ ಒಳಡಿಸಲಾಗುವುದು. ಅವರು ಎದುರಿಸುತ್ತಿರುವ ಮಾನಸಿಕ ಸಮಸ್ಯೆಗಳನ್ನು ಗುರುತಿಸಲಾಗುವುದು. ಮಾನಸಿಕ ಸಮಸ್ಯೆಗಳ ಚಿಕಿತ್ಸೆಗೆ ಇರುವ ವ್ಯವಸ್ಥೆಗಳ ಬಗ್ಗೆಯೂ ಈ ಸಮೀಕ್ಷೆಯಡಿ ಅಧ್ಯಯನ ನಡೆಸಲಾಗುತ್ತದೆ. ಕೆಲಸದ ಒತ್ತಡ, ಸಾಮಾಜಿಕ ಮಾಧ್ಯಮಗಳ ಬಳಕೆ, ಮೊಬೈಲ್‌ ಗೇಮ್‌ಗಳ ಪ್ರಭಾವ ಸೇರಿದಂತೆ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗುವ ವಿವಿಧ ಸಂಗತಿಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತದೆ’ ಎಂದು ಹೇಳಿದರು.

ADVERTISEMENT

‘ಕೋವಿಡ್‌ ಕಾಯಿಲೆ ಕಾಣಿಸಿಕೊಂಡ ಬಳಿಕ ನಗರ ಪ್ರದೇಶದ ಹೆಚ್ಚಿನವರಲ್ಲಿ ಮಾನಸಿಕ ಸಮಸ್ಯೆಗಳು ಕಾಣಸಿಕೊಂಡಿವೆ. ಇತ್ತೀಚಿನ ವರ್ಷಗಳಲ್ಲಿ ಮಕ್ಕಳನ್ನೂ ಕೆಲವೊಂದು ಮಾನಸಿಕ ಸಮಸ್ಯೆಗಳು ಕಾಡಲಾರಂಭಿಸಿವೆ.ಈ ಬಗ್ಗೆಯೂ ಸಮೀಕ್ಷೆಯಡಿ ಅಧ್ಯಯನ ನಡೆಸಲಾಗುವುದು. ಹೆಚ್ಚುತ್ತಿರುವ ಮಾನಸಿಕ ಸಮಸ್ಯೆಗೆ ಈಗಲೇ ಪರಿಹಾರ ಕಂಡುಕೊಳ್ಳಬೇಕಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.