ಯಲಹಂಕ: ರಾಷ್ಟ್ರೀಯ ಪೈಲಟ್ಸ್(ಆಂಬುಲೆನ್ಸ್ ಚಾಲಕರ) ದಿನಾಚರಣೆಯ ಪ್ರಯುಕ್ತ ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಕವಚ(108)ಸಂಘದ ಸದಸ್ಯರು ಹಾಗೂ ಗ್ರಾಮದ ಮುಖಂಡರು ಆಂಬುಲೆನ್ಸ್ ಚಾಲಕರನ್ನು ಸನ್ಮಾನಿಸಿ ಗೌರವಿಸಿದರು.
ಚಾಲಕರು ಕೇಕ್ ಕತ್ತರಿಸಿ, ಸಿಹಿಹಂಚುವ ಮೂಲಕ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ಸಂಘದ ಬೆಂಗಳೂರು ಕೇಂದ್ರ ಘಟಕದ ವ್ಯವಸ್ಥಾಪಕ ಸ್ವಾಮಿ, ಅಪಘಾತಗಳಾದ ತುರ್ತು ಸಂದರ್ಭದಲ್ಲಿ ತಕ್ಷಣ ಸ್ಥಳಕ್ಕೆಧಾವಿಸಿ, ಜನರ ಪ್ರಾಣ ಉಳಿಸಲು ಶ್ರಮಿಸುವ ಆಂಬುಲೆನ್ಸ್ ಚಾಲಕರ ಕಾರ್ಯ ಶ್ಲಾಘನೀಯ. ಅವರ ಸೇವೆಯನ್ನು ಗುರುತಿಸಿ, ಸನ್ಮಾನಿಸುವುದರ ಜೊತೆಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸೇವೆ ಸಲ್ಲಿಸಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಬೆಟ್ಟಹಸಲೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪಂಚಮಿ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್, ಉಪಾಧ್ಯಕ್ಷ ಬಿ.ಆರ್.ಪ್ರವೀಣ್, ಮುಖಂಡ ಬಿ.ಕೆ.ರವೀಂದ್ರನಾಥಗೌಡ, ಪ್ರಾಥಮಿಕ ಆರೋಗ್ಯಕೇಂದ್ರದ ವೈದ್ಯಾಧಿಕಾರಿ ಡಾ.ಯಶಸ್ವಿನಿ, ಪೈಲಟ್ ಅಸೋಸಿಯೇಶನ್‌ನ ಬೆಂಗಳೂರು ಜಿಲ್ಲಾ ವ್ಯವಸ್ಥಾಪಕ ಆಸಿಫ್ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.