ADVERTISEMENT

ಮಲ್ಲಿಕಾ ಘಂಟಿಗೆ ‘ರಾಷ್ಟ್ರಕವಿ ಕುವೆಂಪು ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 21 ಜುಲೈ 2023, 19:30 IST
Last Updated 21 ಜುಲೈ 2023, 19:30 IST
ಮಲ್ಲಿಕಾ ಘಂಟಿ
ಮಲ್ಲಿಕಾ ಘಂಟಿ   

ಬೆಂಗಳೂರು: ಕುವೆಂಪು ಕಲಾನಿಕೇತನ ಸಂಸ್ಥೆ ನೀಡುವ ‘ರಾಷ್ಟ್ರಕವಿ ಕುವೆಂಪು ಪ್ರಶಸ್ತಿಗೆ’ ಲೇಖಕಿ ಮಲ್ಲಿಕಾ ಘಂಟಿ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ. ಆ.8ರಂದು ಇಲ್ಲಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಘದ ಅಧ್ಯಕ್ಷ ಕುವೆಂಪು ಪ್ರಕಾಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT