ADVERTISEMENT

ರಾಷ್ಟ್ರೀಯ ಸುರಕ್ಷತಾ ದಿನಾಚರಣೆ ಇಂದು

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 21:03 IST
Last Updated 3 ಮಾರ್ಚ್ 2021, 21:03 IST

ಬೆಂಗಳೂರು: ನಗರದ ಜಾಲಹಳ್ಳಿಯ ರಾಷ್ಟ್ರಕವಿ ಕುವೆಂಪು ಕಲಾಕ್ಷೇತ್ರದಲ್ಲಿ ಮಾ.4ರಂದು ರಾಷ್ಟ್ರೀಯ ಸುರಕ್ಷತಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ, ರಾಜ್ಯಮಟ್ಟದ ಸುರಕ್ಷತಾ ಪ್ರಶಸ್ತಿಗಳನ್ನು ಅವರು ಪ್ರದಾನ ಮಾಡಲಿದ್ದಾರೆ.

ರಾಷ್ಟ್ರೀಯ ಸುರಕ್ಷತಾ ಪರಿಷತ್‌ನ ಕರ್ನಾಟಕ ಶಾಖೆಯ ಗೌರವ ಕಾರ್ಯದರ್ಶಿ ಪಿ.ಸಿ. ವೆಂಕಟೇಶ್ವರಲು ಧ್ವಜಾರೋಹಣ ನೆರವೇರಿಸಲಿದ್ದಾರೆ. ‘ವಿಪತ್ತಿನಿಂದ ಕಲಿಯಿರಿ ಮತ್ತು ಸುರಕ್ಷಿತ ಭವಿಷ್ಯಕ್ಕಾಗಿ ತಯಾರಿ ನಡೆಸಿರಿ’ ಎಂಬ ವಿಷಯವಾಕ್ಯದೊಂದಿಗೆ ಈ ಬಾರಿ ಸುರಕ್ಷತಾ ದಿನವನ್ನು ಆಚರಿಸಲಾಗುತ್ತಿದೆ.

ಪ್ರಶಸ್ತಿ:ಅತ್ಯುತ್ತಮ ಸುರಕ್ಷತಾ ಅಭ್ಯಾಸಗಳನ್ನು ಮತ್ತು ಬಾಯ್ಲರುಗಳ ಉತ್ತಮ ನಿರ್ವಹಣಾ ಪದ್ಧತಿಗಳನ್ನು ಅನುಸರಿಸುತ್ತಿರುವ ಕೈಗಾರಿಕೆಗಳನ್ನು ಇಲಾಖೆಯು ಗುರುತಿಸಿ ಪ್ರಶಸ್ತಿಗಳನ್ನು ನೀಡಲಿದೆ. ಸುರಕ್ಷತಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ ಕಾರ್ಮಿಕರಿಗೂ ಪ್ರಶಸ್ತಿ ನೀಡಲಾಗುತ್ತದೆ. ಸುರಕ್ಷತಾ ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಇದೇ ಸಂದರ್ಭದಲ್ಲಿ ಬಹುಮಾನಗಳನ್ನು ವಿತರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಕೇಂದ್ರ ಕಾರ್ಮಿಕ ಸಚಿವಾಲಯವು1966ರ ಮಾರ್ಚ್‌ 4ರಂದು ಸ್ಥಾಪಿಸಿದೆ.ರಾಷ್ಟ್ರೀಯ ಸುರಕ್ಷತಾ ಪರಿಷತ್‍ ಸ್ಥಾಪಿಸಿತು. ಸ್ವಾಯತ್ತ ಸಂಸ್ಥೆಯಾಗಿರುವ ಇದು, ಎಲ್ಲ ಹಂತಗಳಲ್ಲಿ ಸುರಕ್ಷತೆ ಮತ್ತು ಆರೋಗ್ಯದ ಮೇಲಿನ ಸುಸ್ಥಿರತೆಯನ್ನು ವೃದ್ದಿಸುವುದು, ಉತ್ತೇಜಿಸುವುದು ಮತ್ತು ನಿರ್ವಹಿಸುವ ಕೆಲಸ ಮಾಡುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.