ADVERTISEMENT

ವುಮೆನ್ಸ್‌ ಪಾರ್ಟಿ ರಾಜ್ಯ ಘಟಕಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 19:56 IST
Last Updated 3 ಜನವರಿ 2019, 19:56 IST

ಬೆಂಗಳೂರು: ನ್ಯಾಷನಲ್‌ ವುಮೆನ್ಸ್‌ ಪಾರ್ಟಿಯ ರಾಜ್ಯ ಘಟಕವನ್ನು ಗುರುವಾರನಗರದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಶ್ವೇತಾ ಶೆಟ್ಟಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ರಾಜಕೀಯ ಪಕ್ಷಗಳು ಮಹಿಳೆಯರ ಹಕ್ಕುಗಳು ಮತ್ತು ಸಮಾನತೆಯ ವಿಚಾರಗಳನ್ನು ನಿರ್ಲಕ್ಷಿಸಿವೆ. ಆದ್ದರಿಂದಮಹಿಳಾ ಮೀಸಲಾತಿ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ಪಕ್ಷವನ್ನು ಸ್ಥಾಪಿಸಲಾಗಿದೆ’ ಎಂದು ಹೇಳಿದರು.

‘ಪಕ್ಷ ಸಂಘಟನೆ ಉದ್ದೇಶದಿಂದ ರಾಜ್ಯದಲ್ಲಿ ರೂಪರಾಣಿ ಅಧ್ಯಕ್ಷತೆಯಲ್ಲಿ ಹಂಗಾಮಿ ಸಮಿತಿ ರಚಿಸಲಾಗಿದೆ. ಪಕ್ಷದ ಪದಾಧಿಕಾರಿಗಳ ಆಯ್ಕೆಯ ಬಳಿಕ ಶಾಶ್ವತ ಸಮಿತಿಯನ್ನು ರಚಿಸಲಾಗುತ್ತದೆ’ ಎಂದು ತಿಳಿಸಿದರು.

ADVERTISEMENT

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಲುಹೋರಾಟ ಮಾಡಲಾಗುವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.