
ಲಕ್ಷ್ಮೀ ನರಸಿಂಹಸ್ವಾಮಿ
ಬೆಂಗಳೂರು: ‘ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸಾವನದುರ್ಗದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ 30 ಕೆ.ಜಿ. ಬೆಳ್ಳಿಯಲ್ಲಿ ತಯಾರಿಸಿದ ನವನರಸಿಂಹ ವಜ್ರಕವಚವನ್ನು ದೇಣಿಗೆಯಾಗಿ ನೀಡಲಾಗುವುದು’ ಎಂದು ಶ್ರೀಲಕ್ಷ್ಮೀನರಸಿಂಹಸ್ವಾಮಿ ಸೇವಾ ಟ್ರಸ್ಟ್‌ನ ಅಧ್ಯಕ್ಷ ಶ್ರೀನಿವಾಸಮೂರ್ತಿ ತಿಳಿಸಿದರು.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜ. 28ರಂದು ನಡೆಯುವ ಸಮಾರಂಭದಲ್ಲಿ ನವನರಸಿಂಹ ವಜ್ರಕವಚವನ್ನು ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ನಂಜಾವಧೂತ ಸ್ವಾಮೀಜಿ, ಕಾಂಗ್ರೆಸ್ ನಾಯಕ ಕೆ.ಎಂ. ನಾಗರಾಜ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರದ ಸಚಿವ ಎಚ್.ಡಿ. ಕುಮಾರಸ್ವಾಮಿ, ಶಾಸಕ ಬಾಲಕೃಷ್ಣ, ಸಂಸದರಾದ ಯುದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಡಾ.ಸಿ.ಎನ್. ಮಂಜುನಾಥ್, ಸಚಿವ ರಾಮಲಿಂಗಾರೆಡ್ಡಿ ಭಾಗವಹಿಸಲಿದ್ದಾರೆ’ ಎಂದರು.
ಟ್ರಸ್ಟ್ ಖಜಾಂಚಿ ಕೆ. ಲಕ್ಷ್ಮೀಪತಿ, ಕಾರ್ಯದರ್ಶಿ ಎನ್. ರಶ್ಮಿ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.