ದಾಬಸ್‌ಪೇಟೆ: ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಎನ್.ಸಿ. ಗಿರೀಶ್‌ಗೌಡ (29) ಸೋಮವಾರ ಬೆಳಗಿನ ಜಾವ ನಿಧನರಾದರು. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ಗಿರೀಶ್ ಅವರು ನರಸೀಪುರದ ಚೆನ್ನಕೇಶವಯ್ಯ ಹಾಗೂ ಸರೋಜಮ್ಮ ಅವರ ಹಿರಿಯ ಪುತ್ರ.
ಸೋಮವಾರ ರಾತ್ರಿ ಪಾಳಿ ಕೆಲಸಕ್ಕೆ ಹೋಗಿದ್ದು, ಈ ವೇಳೆ ಅಸ್ವಸ್ಥಗೊಂಡಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಮೂಲಗಳು ಹೇಳಿವೆ.
ಸ್ವಗ್ರಾಮ ನರಸೀಪುರದಲ್ಲಿ ಅಂತ್ಯಕ್ರಿಯೆ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.