ADVERTISEMENT

ನೇಮಕಾತಿ ಇಲ್ಲದೆ ಉನ್ನತ ಶಿಕ್ಷಣ ನಿರ್ಲಕ್ಷ್ಯ: ಸಿಎಂಗೆ ಚಂದ್ರು ಪತ್ರ

​ಪ್ರಜಾವಾಣಿ ವಾರ್ತೆ
Published 3 ಜನವರಿ 2025, 16:26 IST
Last Updated 3 ಜನವರಿ 2025, 16:26 IST
‘ಮುಖ್ಯಮಂತ್ರಿ’ ಚಂದ್ರು
‘ಮುಖ್ಯಮಂತ್ರಿ’ ಚಂದ್ರು   

ಬೆಂಗಳೂರು: ‘ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳದೇ ರಾಜ್ಯ ಸರ್ಕಾರ ಉನ್ನತ ಶಿಕ್ಷಣವನ್ನು ಸಂಪೂರ್ಣ ನಿಲಕ್ಷ್ಯ ಮಾಡುತ್ತಿದೆ’ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ‘ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ 4,709 ಬೋಧಕ ಹುದ್ದೆಗಳು, 9317 ಬೋಧಕೇತರ ಹುದ್ದೆಗಳು ಮಂಜೂರಾಗಿವೆ . ಆದರೆ ಈವರೆಗೆ ಕೇವಲ 1,986 ಬೋಧಕ ಹಾಗೂ 2,989 ಬೋಧಕೇತರ ಹುದ್ದೆಗಳು ಮಾತ್ರ ಭರ್ತಿಯಾಗಿವೆ. 9,051 ಹುದ್ದೆಗಳು ಅನೇಕ ವರ್ಷಗಳಿಂದ ಖಾಲಿ ಇವೆ ಎಂದು ಸರ್ಕಾರದ ಅಂಕಿಅಂಶಗಳೇ ಹೇಳುತ್ತಿವೆ. ಈ ಬಗ್ಗೆ ಮಾಧ್ಯಮಗಳಲ್ಲೂ ವರದಿಯಾಗಿದೆ’ ಎಂದು ವಿವರಿಸಿದ್ದಾರೆ.

‘ಸಿಬ್ಬಂದಿ ಕೊರತೆಯ ಕಾರಣ, ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪರಿಸ್ಥಿತಿ ತೀರಾ ಹದೆಗೆಟ್ಟು ಹೋಗಿದ್ದು, ಸರ್ಕಾರಕ್ಕೆ ಹಿಡಿಶಾಪ ಹಾಕುವಂತಹ ವಾತಾವರಣ ನಿರ್ಮಾಣವಾಗಿದೆ’ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

‘ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರ ಘೋಷಿಸಿದ ಏಳು ಹೊಸ ವಿಶ್ವವಿದ್ಯಾಲಯಗಳಿಗೆ, 467 ಬೋಧಕ ಹುದ್ದೆಗಳು ಮತ್ತು 1787 ಬೋಧಕೇತರ ಹುದ್ದೆಗಳನ್ನು ಮಂಜೂರು ಮಾಡಲಾಗಿತ್ತು. ಆದರೆ, ಈವರೆಗೆ ಒಂದು ಹುದ್ದೆಯನ್ನೂ ಭರ್ತಿ ಮಾಡಿಲ್ಲ. ಇದು ಸರ್ಕಾರದ ನಿರ್ಲಕ್ಷತನಕ್ಕೆ ಹಿಡಿದ ಕನ್ನಡಿಯಾಗಿದೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಬಾಕಿ ಇರುವ ನೇಮಕಾತಿಗಳನ್ನು ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.