ADVERTISEMENT

ಕರ್ತವ್ಯ ಲೋಪ: ಬಿಬಿಎಂಪಿ ಡಿಸಿಎಫ್‌ ಬಿ.ಎಲ್‌.ಜಿ. ಸ್ವಾಮಿ ಎತ್ತಂಗಡಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 19:50 IST
Last Updated 20 ಜೂನ್ 2025, 19:50 IST
<div class="paragraphs"><p>ಬಿಬಿಎಂಪಿ&nbsp;</p></div>

ಬಿಬಿಎಂಪಿ 

   

ಬೆಂಗಳೂರು: ಬಿಬಿಎಂಪಿ ಅರಣ್ಯ ಘಟಕದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಲ್‌.ಜಿ. ಸ್ವಾಮಿ ಅವರನ್ನು ವರ್ಗಾಯಿಸಿ ಅರಣ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಸ್ವಾಮಿ ಅವರಿಗೆ ಹುದ್ದೆ ತೋರಿಸಿಲ್ಲ.

ಚಿಕ್ಕಮಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರನ್ನು ಬಿಬಿಎಂಪಿಗೆ ವರ್ಗಾಯಿಸಲು, ಅವರ ಸೇವೆಯನ್ನು ನಗರಾಭಿವೃದ್ಧಿ ಇಲಾಖೆಯ ವಶಕ್ಕೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ನಗರದಲ್ಲಿ ಬೇಕಾಬಿಟ್ಟಿಯಾಗಿ ಮರ ಕಡಿತ, ಕಂಟೋನ್ಮೆಂಟ್‌ ರೈಲು ನಿಲ್ದಾಣದಲ್ಲಿ ಪಾರಂಪರಿಕ ಮರಗಳ ಕಡಿತದ ಬಗ್ಗೆ ಕ್ರಮ ಕೈಗೊಳ್ಳದಿರುವುದು ಹಾಗೂ ಶ್ರೀನಿವಾಸನಗರದಲ್ಲಿ ವ್ಯಕ್ತಿಯೊಬ್ಬರ ಮೇಲೆ ಕೊಂಬೆ ಬಿದ್ದು ಮೃತಪಟ್ಟಿರುವುದು ಸೇರಿದಂತೆ ಹಲವು ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳದ ಆರೋಪ ಬಿ.ಎಲ್‌.ಜಿ. ಸ್ವಾಮಿ ಅವರ ಮೇಲಿತ್ತು. ‘ಬೇಕಾಬಿಟ್ಟಿಯಾಗಿ ಮರ ಕಡಿಯಲು ಅವಕಾಶ ನೀಡಬಾರದು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೂ ಸೂಚಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.