ಬೆಂಗಳೂರು: ನೇಕಾರ ಸಮುದಾಯಗಳ ಅಭಿವೃದ್ಧಿಗೆ ನಿಗಮ ಸ್ಥಾಪನೆ ಮಾಡದಿದ್ದರೆ ಹೋರಾಟ ರೂಪಿಸಲಾಗುವುದು ಎಂದು ಬಿಬಿಎಂಪಿ ಮಾಜಿ ಉಪ ಮೇಯರ್ ಎಸ್.ಹರೀಶ್ ಎಚ್ಚರಿಸಿದ್ದಾರೆ.
‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖಂಡರ ನಿಯೋಗ ಭೇಟಿ ಮಾಡಿದ್ದ ವೇಳೆ ನಿಗಮ ಸ್ಥಾಪಿಸುವ ಭರವಸೆ ನೀಡಿದ್ದರು. ವಿಧಾನ ಪರಿಷತ್ತಿನಲ್ಲಿ ಹೇಳಿಕೆ ನೀಡಿರುವ ಜವಳಿ ಸಚಿವ ಶ್ರೀಮಂತ ಪಾಟೀಲ, ‘ಈಗಾಗಲೇ ಮೂರು
ನಿಗಮಗಳನ್ನು ಸ್ಥಾಪಿಸಿರುವುದರಿಂದ ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ಅವರು ವಾಪಸ್ ಪಡೆಯದೇ ಇದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.