ADVERTISEMENT

‘ತ್ಯಾಗ ಪರಿಶ್ರಮದಿಂದ ಉತ್ತಮ ಫಲಿತಾಂಶ’

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2019, 19:57 IST
Last Updated 22 ಫೆಬ್ರುವರಿ 2019, 19:57 IST
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್‌.ಲತಾ, ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ, ಜಿಲ್ಲಾ ಶಿಕ್ಷಣಾಧಿಕಾರಿ ಹನುಮಂತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಅಲ್ಮಾಸ್‌ ಪರ್ವೀನ್‌ ತಾಜ್‌ ಇದ್ದಾರೆ
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್‌.ಲತಾ, ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ, ಜಿಲ್ಲಾ ಶಿಕ್ಷಣಾಧಿಕಾರಿ ಹನುಮಂತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಅಲ್ಮಾಸ್‌ ಪರ್ವೀನ್‌ ತಾಜ್‌ ಇದ್ದಾರೆ   

ನೆಲಮಂಗಲ: ‘ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ರಾಜ್ಯಕ್ಕೆ ಮಾದರಿಯಾಗಲು ಶಿಕ್ಷಕರು ತ್ಯಾಗ ಮತ್ತು ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್‌.ಲತಾ ತಿಳಿಸಿದರು.

ಪಟ್ಟಣದ ಹರ್ಷ ಇಂಟರ್‌ನ್ಯಾಷನಲ್‌ ಪಬ್ಲಿಕ್‌ ಶಾಲೆಯಲ್ಲಿ ನಡೆದ ಜಿಲ್ಲಾ ಶೈಕ್ಷಣಿಕ ಸಮಾವೇಶ – 2019 ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಗತಿ ಸಾಧಿಸಿದ ಶಾಲೆಗಳನ್ನು ಜಿಲ್ಲಾಮಟ್ಟದಲ್ಲಿ ಗುರುತಿಸಿ ಗೌರವಿಸಲಾಗುವುದು’ ಎಂದರು.

ವಿಶೇಷ ಉಪನ್ಯಾಸ ನೀಡಿದ ಶಿಕ್ಷಣ ತಜ್ಞ ಶಿವರಾಮರೆಡ್ಡಿ, ‘ಅಧಿಕ ಫಲಿತಾಂಶದ ನಿರೀಕ್ಷೆಗಿಂತ, ಗುಣಮಟ್ಟದ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಶ್ರಮಿಸಿದಾಗ, ಉತ್ತಮ ಫಲಿತಾಂಶ ಬಂದೇ ಬರುತ್ತದೆ’ ಎಂದರು.

ADVERTISEMENT

ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ, ಶಿಕ್ಷಕರ ಸಂಘದ ಕಾರ್ಯದರ್ಶಿ ರವಿಕುಮಾರ್‌ ಮಾತನಾಡಿದರು. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತರನ್ನು ಹರ್ಷ ಸಂಸ್ಥೆಯ ಅಧ್ಯಕ್ಷ ಎಸ್.ಶಿವಕುಮಾರ್‌ ಪುರಸ್ಕರಿಸಿದರು. ಜಿಲ್ಲಾ ಶಿಕ್ಷಣಾಧಿಕಾರಿ ಹನುಮಂತಪ್ಪ, ಖಾಸಗಿ ಶಾಲೆಗಳ ಒಕ್ಕೂಟದ ಟಿ.ಕೆ.ನರಸೇಗೌಡ, ರೇಖಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.