ADVERTISEMENT

ಹರೆಯದ ಕಾಮನೆಗಳನ್ನು ನಿಗ್ರಹಿಸಿ: ನಿರ್ಮಲಾನಂದನಾಥ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2022, 3:10 IST
Last Updated 18 ಏಪ್ರಿಲ್ 2022, 3:10 IST
ನೀಟ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಗೌರವಿಸಿದರು. ಚಿತ್ರದಲ್ಲಿ ಸೌಮ್ಯನಾಥ ಸ್ವಾಮೀಜಿ, ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ ಇದ್ದಾರೆ.
ನೀಟ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಗೌರವಿಸಿದರು. ಚಿತ್ರದಲ್ಲಿ ಸೌಮ್ಯನಾಥ ಸ್ವಾಮೀಜಿ, ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ ಇದ್ದಾರೆ.   

ನೆಲಮಂಗಲ: ಹದಿಹರೆಯದ ಕಾಮನೆಗಳನ್ನು ನಿಗ್ರಹಿಸಿ, ಏಕಾಗ್ರತೆಯಿಂದ ಅಧ್ಯಯನಶೀಲರಾದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.

ಸಮೀಪದ ನಗರೂರಿನ ಬಿಜಿಎಸ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ವಸ್ತಿ ವಿಜಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪರಿಶ್ರಮದಿಂದ ಯಶಸ್ಸು ಸಾಧ್ಯ’ ಎಂದರು.

ಇದೇ ಸಂದರ್ಭದಲ್ಲಿ ನೀಟ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಿದರು. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ, ಸೌಮ್ಯನಾಥ ಸ್ವಾಮೀಜಿ, ಅಮೆರಿಕದ ಅಕ್ಕ ಬಳಗದ ಡಾ.ಅಮರನಾಥಗೌಡ, ಪ್ರಾಂಶುಪಾಲ ಎಚ್.ಪಿ.ಶಾಂತಕುಮಾರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.