
ಪ್ರಜಾವಾಣಿ ವಾರ್ತೆ
ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ, ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪಟ್ಟಣದ ವಿಶ್ವೇಶ್ವರಪುರ ಬೈರವೇಶ್ವರ ಪ್ರೌಢಶಾಲೆಯ ದ್ವಿತೀಯ ದರ್ಜೆ ಸಹಾಯಕ ಜಿ.ಎ.ರಂಗನಾಥ್(41) ಅವರು ಸೋಮವಾರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಗುಡೆಮಾರನಹಳ್ಳಿಗೆ ತೆರಳುತ್ತಿದ್ದ ಇವರಿಗೆ ಮತ್ತೊಂದು ದ್ವಿಚಕ್ರ ವಾಹನ ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ರಂಗನಾಥ್ ಮೃತರಾಗಿದ್ದಾರೆ. ಅವರಿಗೆ ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಗಳಿದ್ದಾಳೆ. ಮಂಗಳವಾರ ಮಧ್ಯಾಹ್ನ ಗುಡೆಮಾರನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.