ADVERTISEMENT

ಚುನಾವಣೆಗೆ ತಡೆ ತೆರವು ಕೋರಿದ ಅರ್ಜಿ: ಕಾಯ್ದಿರಿಸಿದ ಆದೇಶ

​ಪ್ರಜಾವಾಣಿ ವಾರ್ತೆ
Published 10 ಮೇ 2019, 19:06 IST
Last Updated 10 ಮೇ 2019, 19:06 IST
   

ಬೆಂಗಳೂರು: ‘ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆಗೆ ಇದೇ 29ರಂದು ನಡೆಯಬೇಕಿದ್ದ ಚುನಾವಣೆಗೆ ಮಧ್ಯಂತರ ತಡೆ ನೀಡಿರುವುದನ್ನು ತೆರವುಗೊಳಿಸಬೇಕು’ ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಪೂರ್ಣಗೊಳಿಸಿದೆ. ಈ ಕುರಿತ ಆದೇಶವನ್ನು ಇದೇ 13ರಂದು ಪ್ರಕಟಿಸುವುದಾಗಿ ತಿಳಿಸಿದೆ.

ಚುನಾವಣೆಗೆ ತಡೆ ನೀಡುವಂತೆ ಕೋರಿ ನೆಲಮಂಗಲದ ಎನ್. ಪಿ. ಹೇಮಂತ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಮೇ 8ರಂದು ವಿಚಾರಣೆ ನಡೆಸಿದ್ದ ನ್ಯಾಯಪೀಠ ಚುನಾವಣೆಗೆ 4 ವಾರಗಳ ತಡೆ ನೀಡಿತ್ತು.

‘ಈ ಮಧ್ಯಂತರ ತಡೆ ಆದೇಶ ಹಿಂಪಡೆಯಬೇಕು’ ಎಂದು ಕೋರಿ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆಗೆ ನಡೆಸಿ ಆದೇಶ ಕಾಯ್ದಿರಿಸಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.