
ಪ್ರಜಾವಾಣಿ ವಾರ್ತೆ
ಅಪಘಾತಕ್ಕೀಡಾದ ಕಾರು ಹಾಗೂ ಬಸ್
ಬೆಂಗಳೂರು: ನೆಲಮಂಗಲ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತುಮಕೂರಿನಿಂದ ಬರುತ್ತಿದ್ದ ಇಂಡಿಕಾ ಕಾರು, ನೆಲಮಂಗಲ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಎದುರು ದಿಕ್ಕಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಬಸ್‌ನ ಮುಂಭಾಗಕ್ಕೂ ತೀವ್ರ ಹಾನಿಯಾಗಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿಂದಾಲ್ ಮೇಲ್ಸೇತುವೆ ಬಳಿ ರಾತ್ರಿ 11.30ರ ವೇಳೆಗೆ ಅವಘಡ ಸಂಭವಿಸಿದೆ. ಅತಿವೇಗದ ಚಾಲನೆಯೇ ಅಪಘಾತ್ಕೆ ಕಾರಣ ಎನ್ನಲಾಗಿದೆ.
ಮೃತ ಯುವಕರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.