ನೆಲಮಂಗಲ: ಚಿನ್ನಾಭರಣ ಅಂಗಡಿಗೆ ನುಗ್ಗಿ ದರೋಡೆ ನಡೆಸಿದ್ದ ಪ್ರಕರಣವನ್ನು ಮಾದನಾಯನಹಳ್ಳಿ ಪೊಲೀಸರು ಭೇದಿಸಿದ್ದು, ಮೂವರನ್ನು ಬಂಧಿಸಿದ್ದಾರೆ.
ಮೊಹಮ್ಮದ್ ರಫಿಕ್, ಮೊಹಮ್ಮದ್ ಇಬ್ತೇಕರ್, ರಂಶಾದ್ ಬಂಧಿತರು. ಪ್ಲಾಸ್ಟಿಕ್‌ನಿಂದ ತಯಾರಿಸಿದ್ದ ಗನ್ ಮಾದರಿ ವಸ್ತು ಹಿಡಿದು ಬೆದರಿಸಿ ಆಭರಣ ದೋಚಿದ್ದರು.
ಜೂನ್ 25ರಂದು ಮಾಗಡಿ ರಸ್ತೆಯ ಮಾಚೋಹಳ್ಳಿಯಲ್ಲಿ ಚಿನ್ನಾಭರಣ ಅಂಗಡಿಗೆ ನುಗ್ಗಿ, ಮಾಲೀಕ ಹಾಗೂ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ ದೋಚಿ ಪರಾರಿ ಆಗಿದ್ದರು. ಉಡುಪಿ, ಒಡಿಶಾ, ಮಂಗಳೂರು ಮೂಲದ ಆರೋಪಿಗಳು ಎಂಬುದು ಗೊತ್ತಾಗಿದೆ.
ಬಂಧಿತರಿಂದ ₹30 ಲಕ್ಷ ಮೌಲ್ಯದ 90 ಗ್ರಾಂ ಚಿನ್ನಾಭರಣ, ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಮೂವರು ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ. 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.