
ಸಾವು (ಪ್ರಾತಿನಿಧಿಕ ಚಿತ್ರ)
ನೆಲಮಂಗಲ: ತಾಲ್ಲೂಕಿನ ಟಿ.ಬೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಶುಕ್ರವಾರ ಮುಂಜಾನೆ ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗದಗ ಜಿಲ್ಲೆ ರೋಣ ತಾಲ್ಲೂಕಿನ ಶಿವನಗೌಡ ಪಾಟೀಲ(64) ಹಾಗೂ ಪ್ರಮೀಳಾ ಪಾಟೀಲ(45) ಮೃತಪಟ್ಟವರು.
ಕಾರಿನಲ್ಲಿದ್ದ ಮೃತರ ಸಂಬಂಧಿಗಳಾದ ಹೊನ್ನಮ್ಮ, ಸುನಿಲ್, ಬಸವರಾಜು ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಕಾರಿನಲ್ಲಿ ಐವರು ಗುರುವಾರ ರಾತ್ರಿ ಗದಗದಿಂದ ಹೊರಟಿದ್ದರು. ಅವರು ಶುಕ್ರವಾರ ಮುಂಜಾನೆ ಬೆಂಗಳೂರಿನತ್ತ ಬರುತ್ತಿದ್ದರು. ಆ ಸಂದರ್ಭದಲ್ಲಿ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.
ನೆಲಮಂಗಲ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.