
ನೆಲಮಂಗಲ: ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ತಿರುವಿನಲ್ಲಿ ನಡೆದಿದೆ.
ಗುಡೇಮಾರನಹಳ್ಳಿಯ ಪ್ರೇಮಕುಮಾರ್(35), ರಮೇಶ್(45) ಮೃತರು. ಗುಡೇಮಾರನಹಳ್ಳಿ ಕಡೆಯಿಂದ ಬಂದ ಟ್ರ್ಯಾಕ್ಟರ್, ಮಲ್ಲರ ಬಾಣವಾಡಿಯ ಕಡೆ ತಿರುವು ಪಡೆಯುತ್ತಿದ್ದ ವೇಳೆ ಹಾಸನ ಕಡೆಗೆ ಹೊರಟಿದ್ದ ಲಾರಿ ರಭಸವಾಗಿ ಡಿಕ್ಕಿ ಹೊಡೆದಿದೆ. ಟ್ರಾಕ್ಟರ್ ಪಲ್ಟಿಯಾಗಿ ಅದರಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲಮಂಗಲ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಅವೈಜ್ಞಾನಿಕ ರಸ್ತೆ ತಿರುವು ಮಾಡಿರುವುದೇ ಅಪಘಾತಕ್ಕೆ ಕಾರಣ. ಇಲ್ಲಿ ಹಲವು ಅಪಘಾತ ನಡೆದರೂ ಹೆದ್ದಾರಿ ಪ್ರಾಧಿಕಾರದವರು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಸಾರ್ವಜನಿಕರು ಆಕ್ರೋಶ
ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.