ನೆಲಮಂಗಲ: ಶಾಸಕರ ಅನುದಾನದಲ್ಲಿ ಟಿಎಪಿಸಿಎಂಎಸ್‌ನ ಕಟ್ಟಡದ ಒಳಾಂಗಣ ವಿನ್ಯಾಸ ಹಾಗೂ ಸಂಪರ್ಕಕ್ಕೆ ಕಾಂಕ್ರೀಟ್ ರಸ್ತೆ ನಿರ್ಮಿಸಕೊಡಲಾಗುವುದು ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.
ನೆಲಮಂಗಲ ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎನ್.ನರಸಿಂಹಮೂರ್ತಿ ಮಾತನಾಡಿ, ‘ಒಟ್ಟು 3,432 ಚದರ ಅಡಿಯ ಮೂರು ಅಂತಸ್ತಿತ ಕಟ್ಟಡ ನಿರ್ಮಿಸಲಾಗಿದ್ದು, ವ್ಯಾಪಾರ ಮಳಿಗೆ, ಗೋದಾಮು, ಆಡಳಿತ ಕಚೇರಿ ಒಳಗೊಂಡಿದೆ. ಕಟ್ಟಡ ನಿರ್ಮಾಣಕ್ಕೆ ₹1.75 ಕೋಟಿ ವೆಚ್ಚವಾಗಿದ್ದು, ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದಿಂದ ₹99 ಲಕ್ಷ ಸಾಲ ಪಡೆಯಲಾಗಿದೆ’ ಎಂದರು.
ಉಪಾಧ್ಯಕ್ಷ ಮೋಹನ್ ಕುಮಾರ್, ನಿರ್ದೇಶಕ ಗುರು ಪ್ರಕಾಶ್, ಜಗಜ್ಯೋತಿ ಬಸವೇಶ್ವರ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಟ್ಟಾಭಿರಾಮಯ್ಯ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ನಾಗರಾಜು, ಮಾಜಿ ಅಧ್ಯಕ್ಷ ಎಂ.ನಾರಾಯಣಗೌಡ, ನಗರಸಭೆ ಅಧ್ಯಕ್ಷ ಎನ್.ಗಣೇಶ್, ವಕೀಲರ ಸಂಘದ ಅಧ್ಯಕ್ಷ ಕೇಶವಮೂರ್ತಿ, ನಗರಸಭೆ ಸದಸ್ಯೆ ಲೋಲಾಕ್ಷಿ ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.