ADVERTISEMENT

ಎನ್‌ಇಪಿ: ಶಿಕ್ಷಣ ವ್ಯವಸ್ಥೆಯ ಪುನರುಜ್ಜೀವನ

​ಪ್ರಜಾವಾಣಿ ವಾರ್ತೆ
Published 29 ಜೂನ್ 2021, 21:04 IST
Last Updated 29 ಜೂನ್ 2021, 21:04 IST
ವೆಬಿನಾರ್‌ನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿದರು.
ವೆಬಿನಾರ್‌ನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿದರು.   

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್‌ಇಪಿ) ಶಿಕ್ಷಣ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸುತ್ತದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

‌ರಾಜಾಜಿನಗರ ಶಿಕ್ಷಣ ಸಂಸ್ಥೆಯ ಅರಬಿಂದೊ ಪದವಿ ಕಾಲೇಜು ಹಾಗೂಬೆಂಗಳೂರು ವಿಶ್ವವಿದ್ಯಾಲಯದ ಶಿಕ್ಷಕರ ವಾಣಿಜ್ಯ ಮತ್ತು ನಿರ್ವಹಣಾ ಮಂಡಳಿ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ‘ಎನ್ಇಪಿ-ಶಿಕ್ಷಣದ ಬದಲಾದ ಸನ್ನಿವೇಶದಲ್ಲಿ ಪಾಲುದಾರರ ಜವಾಬ್ದಾರಿಗಳು’ವೆಬಿನಾರ್‌ನಲ್ಲಿ ಅವರು ಮಾತನಾಡಿದರು.

‘ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪಾಲುದಾರರ ಪಾತ್ರ ಮಹತ್ವದ್ದು ಹಾಗೂ ಸಾಮೂಹಿಕ ಜವಾಬ್ದಾರಿ ಅವಶ್ಯಕ’ ಎಂದು ಹೇಳಿದರು.

ADVERTISEMENT

ರಾಜಾಜಿನಗರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಟಿ.ಎನ್.ರವಿಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಶೈಲಜಾ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.