ADVERTISEMENT

ಬೆಂಗಳೂರು | ಆಭರಣ ಕಳ್ಳತನ: ನೇಪಾಳಿ ಗ್ಯಾಂಗ್‌ ಬಂಧನ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2025, 22:30 IST
Last Updated 8 ಏಪ್ರಿಲ್ 2025, 22:30 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಮನೆಗೆ ನುಗ್ಗಿ ಚಿನ್ನ, ವಜ್ರ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಕಳ್ಳತನ ಮಾಡುತ್ತಿದ್ದ ನೇಪಾಳಿ ತಂಡದ ಐವರನ್ನು ತಲಘಟ್ಟಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ನೇಪಾಳದ ಲಾಲ್‌ ಬಹದ್ದೂರ್ ಬೋರಾ, ಕಮಲ್ ಬಹದ್ದೂರ್, ಕಿರಣ್ ಬೋರಾ, ನೇತ್ರ ಬಹದ್ದೂರ್, ರಾಜೇಶ್ ಬಹದ್ದೂರ್ ಬಂಧಿತರು.

ಬಂಧಿತರಿಂದ 502 ಗ್ರಾಂ. ಚಿನ್ನ ಹಾಗೂ ವಜ್ರಾಭರಣ, 4.5 ಕೆ.ಜಿ ಬೆಳ್ಳಿ ಸಾಮಗ್ರಿ, ಎರಡು ಮೊಬೈಲ್‌ ಫೋನ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇವುಗಳ ಮೌಲ್ಯ ₹ 50 ಲಕ್ಷ ಎಂದು ಅಂದಾಜಿಸಲಾಗಿದೆ.

ಠಾಣಾ ವ್ಯಾಪ್ತಿಯ ಗುಬ್ಬಲಾಳದ ಜೆ.ಎಚ್‌.ಬಿ.ಸಿ.ಎಸ್‌ ಲೇಔಟ್‌ನಲ್ಲಿ ವಾಸವಿರುವ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ಆರೋಪಿಗಳು ಕಳ್ಳತನ ಮಾಡಿ ಪರಾರಿ ಆಗಿದ್ದರು. ಮನೆಯ ಮಾಲೀಕರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

‘ಅಪಾರ್ಟ್‌ಮೆಂಟ್‌ ಸೆಕ್ಯೂರಿಟಿ ಗಾರ್ಡ್‌ ಆಗಿ ಆರೋಪಿಗಳು ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ತೆರಳುವಾಗ ಬೀಗ ಹಾಕಿದ ಮನೆಗಳನ್ನು ಗುರುತಿಸುತ್ತಿದ್ದರು. ರಾತ್ರಿ ವೇಳೆ ಹೊಂಚು ಹಾಕಿ ಬೀಗ ಒಡೆದು ಆಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.