
ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ಸಸ್ಯಕಾಶಿ’ ಲಾಲ್‌ಬಾಗ್‌ಗೆ ಪ್ರವೇಶಿಸಲು ಮತ್ತೊಂದು ಗೇಟ್ ತೆರೆಯಲಾಗುತ್ತಿದೆ. ಇದರಿಂದ ಉದ್ಯಾನದ ಪರಿಸರಕ್ಕೆ ಧಕ್ಕೆಯಾಗಲಿದೆ’ ಎಂದು ಲಾಲ್‌ಬಾಗ್ ವಾಯುವಿಹಾರಿಗಳು ದೂರಿದ್ದಾರೆ.
‘ಸರ್ಕಾರ ಇದಕ್ಕೆ ಅವಕಾಶ ನೀಡಬಾರದು’ ಎಂದು ವಾಯು ವಿಹಾರಿಗಳಾದ ಶಿವಕುಮಾರ್, ಅಶೋಕ್ ಒತ್ತಾಯಿಸಿದ್ದಾರೆ.
ವಾಹನಗಳ ಸಂಚಾರ ಕಡಿಮೆ ಮಾಡುವ ಉದ್ದೇಶದಿಂದ ಇಲಾಖೆಯ ಕ್ಯಾಂಟೀನ್ ಪಕ್ಕದಲ್ಲಿ ನೂತನ ಗೇಟ್ ತೆರೆಯುವ ಚಿಂತನೆ ಇದೆ’ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.