ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಹೊಸ ವರ್ಷಾಚರಣೆಯ ಪಾರ್ಟಿಯಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿಕೊಂಡು ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರರು ಹಾಗೂ ವಾಹನ ಚಾಲಕರ ವಿರುದ್ಧ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು 513 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಮಂಗಳವಾರ ದಿನವಿಡೀ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. 28,127ಕ್ಕೂ ಹೆಚ್ಚು ವಾಹನಗಳನ್ನು ತಪಾಸಣೆ ನಡೆಸಲಾಯಿತು. ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಯಿತು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.