ಸಾಂದರ್ಭಿಕ ಚಿತ್ರ
ಬೆಂಗಳೂರು: 2024ರ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜಿಸಲು ಹಲವರು ಸಿದ್ಧತೆ ನಡೆಸುತ್ತಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಅಂಥ ಪಾರ್ಟಿಗಳು ಹಾಗೂ ಆಯೋಜಕರ ಮೇಲೆ ನಿಗಾ ಇರಿಸಿ ಕಾನೂನು ಕ್ರಮ ಜರುಗಿಸುವಂತೆ ಕಮಿಷನರ್ ಬಿ. ದಯಾನಂದ್ ಅವರು ಪೊಲೀಸರಿಗೆ ಖಡನ್ ಸೂಚನೆ ನೀಡಿದ್ದಾರೆ.
ಪೊಲೀಸ್ ಅಧಿಕಾರಿಗಳ ಸಭೆ ನಡೆಸಿರುವ ಕಮಿಷನರ್, ಡ್ರಗ್ಸ್ ಸಾಗಣೆ ಹಾಗೂ ಮಾರಾಟ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸುವಂತೆ ಹೇಳಿದ್ದಾರೆ.
‘ಹೊಸ ವರ್ಷವನ್ನು ಸ್ವಾಗತಿಸಲು ನಗರದ ಹಲವು ಕಡೆಗಳಲ್ಲಿ ವಿಶೇಷ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದೆ. ಇಂಥ ಸಂದರ್ಭದಲ್ಲಿಯೇ ಡ್ರಗ್ಸ್ ಮಾರಾಟಕ್ಕೆ ಪೆಡ್ಲರ್‌ಗಳು ತೆರೆಮರೆಯಲ್ಲಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಹೊಸ ವರ್ಷಾಚರಣೆಗೆ ಸಂಗ್ರಹಿಸಿಟ್ಟಿದ್ದ ₹ 21 ಕೋಟಿ ಮೌಲ್ಯದ ಮಾದಕ ವಸ್ತುವನ್ನು ಇತ್ತೀಚೆಗಷ್ಟೇ ಜಪ್ತಿ ಮಾಡಲಾಗಿದೆ. ಇದೇ ಮಾದರಿಯಲ್ಲಿ ಹಲವು ಪೆಡ್ಲರ್‌ಗಳು, ಡ್ರಗ್ಸ್ ಸಂಗ್ರಹಿಸಿಟ್ಟುಕೊಂಡಿರುವ ಮಾಹಿತಿಯೂ ಲಭ್ಯವಾಗಿದೆ. ಪೊಲೀಸ್ ಕಾರ್ಯಾಚರಣೆಗಳು ನಿರಂತರವಾಗಿ ನಡೆಯಲಿವೆ’ ಎಂದು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.