
ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಈ ಬಾರಿ ಪತ್ರಿಕಾ ವಿತರಕರಿಗೆ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು ಎಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಪತ್ರಿಕಾ ವಿತರಕರ ಸಂಕಷ್ಟಗಳನ್ನು ಆಲಿಸಿದ ಸಿದ್ದರಾಮಯ್ಯ, ಬಜೆಟ್‌ನಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವ ಭರವಸೆ ನೀಡಿದರು.
ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ ಶಂಭುಲಿಂಗ, ಪ್ರಧಾನ ಕಾರ್ಯದರ್ಶಿ ಸಂಗಂ ಸುರೇಶ್, ಗಾಂಧಿನಗರದ ಶಿವಶಾಂತ್ ಕುಮಾರ್, ಸಂಘಟನಾ ಕಾರ್ಯದರ್ಶಿ ನಾದೋರು ವಾಸುದೇವ, ತುಮಕೂರು ಜಿಲ್ಲಾ ದಿನ ಪತ್ರಿಕೆ ಹಂಚಿಕೆದಾರರ ಸಂಘದ ಅಧ್ಯಕ್ಷರಾದ ಚಲುವರಾಜು, ನಿರ್ದೇಶಕರಾದ ಗಂಗ ಮುತ್ತಯ್ಯ, ಹನುಮಂತರಾಜು, ಮೈಸೂರು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜೆ.ಎಸ್. ಹೋಮದೇವ, ನಿರ್ದೇಶಕರಾದ ನಾಗೇಶ್, ಶ್ರೀಕಾಂತ್, ಗೋವಿಂದು, ಹರಿರಾವ್, ದಾವಣಗೆರೆ ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.