ADVERTISEMENT

ದಾಬಸ್‌ಪೇಟೆ | ಅಪಘಾತ: ಅರಣ್ಯ ರಕ್ಷಕ ಸೇರಿ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2025, 14:44 IST
Last Updated 25 ಆಗಸ್ಟ್ 2025, 14:44 IST
ಕೆಂಪಣ್ಣ 
ಕೆಂಪಣ್ಣ    

ದಾಬಸ್‌ಪೇಟೆ: ರಾಷ್ಟ್ರೀಯ ಹೆದ್ದಾರಿ–48ರ ಹನುಮಂತಪುರ ಗೇಟ್ ಬಳಿ, ಬೈಕ್ ಮತ್ತು ಕ್ಯಾಂಟರ್ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಅರಣ್ಯ ರಕ್ಷಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಕತ್ತಿಗನೂರು ಬಳಿಯ ಮಾರುತಿ ನಗರದ ಕೆಂಪಣ್ಣ (52) ಮತ್ತು ಕುಲವನಹಳ್ಳಿಯ ರಾಜಣ್ಣ ಮೃತರು.

ದಾಬಸ್‌ಪೇಟೆ ಪಟ್ಟಣದಿಂದ ಇಬ್ಬರೂ ಒಂದೇ ಬೈಕ್‌ನಲ್ಲಿ ಊರಿಗೆ ತೆರಳುತ್ತಿದ್ದರು. ಹನುಮಂತಪುರದ ಹತ್ತಿರ ಬಂದಾಗ ಹಿಂಬದಿಯಿಂದ ವೇಗವಾಗಿ ಬಂದ ಕ್ಯಾಂಟರ್ ವಾಹನವೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಹಿಂಬದಿ ಸವಾರ ಕೆಂಪಣ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಾಜಣ್ಣ ಆಸ್ಪತ್ರೆಯಲ್ಲಿ ಮೃತಪಟ್ಟರು.

ADVERTISEMENT

ಕೆಂಪಣ್ಣ ಅವರು ಅರಣ್ಯ ರಕ್ಷಕರಾಗಿ ಕೆಲಸ ಮಾಡುತ್ತಿದ್ದರು. ರಾಜಣ್ಣ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನನ್ನು ಬಂಧಿಸಿದ್ದು, ಕ್ಯಾಂಟರ್ ವಾಹನ ಜಪ್ತಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.