
ಬೆಂಗಳೂರು: ತಾಂತ್ರಿಕ ಕಾರಣದಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್ಎಂ) ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿ ವಿಳಂಬವಾಗಿದೆ ಎಂದು ಎನ್‌ಎಚ್ಎಂ ಸ್ಪಷ್ಟನೆ ನೀಡಿದೆ.
ಎನ್‌ಎಚ್‌ಎಂ ಅಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ವೇತನ ಪಾವತಿಯಾಗಿಲ್ಲ.
‘ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯನ್ನು ಆರ್ಥಿಕ ವರ್ಷದ ಮಧ್ಯಭಾಗದಲ್ಲಿ, ‘ಎಸ್‌ಎನ್‌ಎ–ಸ್ಪರ್ಶ್’ ಎಂಬ ಹೊಸ ಹಣಕಾಸು ವ್ಯವಸ್ಥೆಗೆ ವರ್ಗಾಯಿಸಲಾಗಿದೆ. ಈ ಸಂದರ್ಭದಲ್ಲಿ, ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ನಿಧಿ ಬಿಡುಗಡೆ ಹಾಗೂ ಪಾವತಿ ಪ್ರಕ್ರಿಯೆಗಳಲ್ಲಿ ತಾಂತ್ರಿಕ ಬದಲಾವಣೆಗಳು ಅಗತ್ಯ. ಇದರಿಂದಾಗಿ ವೇತನ ಪಾವತಿ ವಿಳಂಬವಾಗಿದೆ’ ಎಂದು ಎನ್‌ಎಚ್‌ಎಂ ಹೇಳಿದೆ.
‘ಕೇಂದ್ರ ಸರ್ಕಾರವು ಇದೇ 8ರಂದು ₹175.75 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಶೀಘ್ರ ಜಿಲ್ಲೆಗಳಿಗೆ ಒದಗಿಸಲಾಗುವುದು’ ಎಂದು ಭರವಸೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.